ಕಾರವಾರ: ಭಟ್ಕಳ (Bhatkal)ದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಬೆನ್ನಲ್ಲೇ ಮದ್ಯ ಮಾರಾಟ ನಿಷೇಧಿಸಿ ಉತ್ತರ ಕನ್ನಡ (Uttara Kannada) ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ (DC orders).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೇ ೨೫ರ ಬೆಳಿಗ್ಗೆ ೬ ಗಂಟೆಯಿಂದ ಮೇ ೨೭ರಂದು ಬೆಳಿಗ್ಗೆ ೬ ಗಂಟೆಯವರೆಗೆ ಭಟ್ಕಳ ಶಹರ ಹಾಗೂ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ ಮತ್ತು ಬಾರ್‌ಗಳನ್ನು ಬಂದ್ ಮಾಡಿ ಮದ್ಯ ಸಾಗಾಟ/ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರಿಯ ಆದೇಶ ಹೊರಡಿಸಿದ್ದಾರೆ (DC orders).



