ಭಟ್ಕಳ (Bhatkal): ತಾಲೂಕು ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕರ ತಾಯಿ ಮಹಾದೇವಿ ಗಣಪತಿ ನಾಯ್ಕ(೭೫) ಶನಿವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು (death news).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೂರು ದಿನಗಳ ಹಿಂದೆ ಮಣಿಪಾಲ (manipal) ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ (death news). ಮೃತರಿಗೆ ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ.
ಇದನ್ನೂ ಓದಿ : RDPR Department/ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಚಾಲನೆ
ಇವರ ನಿಧನಕ್ಕೆ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಆರ್.ಮಾನ್ವಿ, ಗೌರವ ಅಧ್ಯಕ್ಷ ರಾಧಕೃಷ್ಣ ಭಟ್, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಉಪಾಧ್ಯಕ್ಷ ವಿಷ್ಣು ದೇವಾಡಿಗ, ಹಿರಿಯ ಪತ್ರಕರ್ತ ಸತೀಶ ಕುಮಾರ ನಾಯ್ಕ, ಮೋಹನ ನಾಯ್ಕ, ಇನಾಯತುಲ್ಲಾ ಗವಾಯಿ, ಅತಿಕುರ್ರೆಹಮಾನ್ ಶಾಬಂದ್ರಿ ಸೇರಿದಂತೆ ತಾಲೂಕಿನ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪಡೆದ ವಾಸುದೇವ ಮೊಗೇರ