ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ಜುಲೈ ತಿಂಗಳಲ್ಲಿ ಜರುಗಿಸಿದ ೨೦೨೪-೨೫ನೇ ಸಾಲಿನ ೬ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ಭಟ್ಕಳ (Bhatkal) ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ೯೬.೨೪% ಫಲಿತಾಂಶ ಲಭಿಸಿದೆ (Degree result).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಬಿಸಿಎ ವಿಭಾಗದಲ್ಲಿ ಭೂಮಿಕಾ ಕುಂದಾಪುರ ೯.೬೩, ಬಿಕಾಂ ವಿಭಾಗದಲ್ಲಿ ಮಹಾಲಕ್ಷ್ಮೀ ಕಾಮತ ೯.೮೮, ಬಿಬಿಎ ವಿಭಾಗದಲ್ಲಿ ಶ್ರೀನಿಧಿ ಪೈ ೯.೬೫ ಹಾಗೂ ಬಿಎ ವಿಭಾಗದಲ್ಲಿ ಚಂದನಾ ನಾಯ್ಕ ೯.೨೩ ಎಸ್ಜಿಪಿಎ ಅಂಕಗಳಿಸಿರುತ್ತಾರೆ. ಸದರಿ ಪರೀಕ್ಷೆಯಲ್ಲಿ ಬಿಸಿಎ ವಿಭಾಗದಲ್ಲಿ ೧೦೮ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ, ೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಬಿಕಾಂ ವಿಭಾಗದಲ್ಲಿ ೯ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೮೧ ಉತ್ತಮ ಶ್ರೇಣಿಯಲ್ಲಿ ಹಾಗೂ ೧೩ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಬಿಬಿಎ ವಿಭಾಗದಲ್ಲಿ ೧ ವಿದ್ಯಾರ್ಥಿ ಅತ್ಯುತ್ತಮ ಶ್ರೇಣಿಯಲ್ಲಿ, ೨೭ ಉತ್ತಮ ಶ್ರೇಣಿಯಲ್ಲಿ ಹಾಗೂ ೭ ಪ್ರಥಮ ಶ್ರೇಣಿಯಲ್ಲಿ ಮತ್ತು ಬಿಎ ವಿಭಾಗದಲ್ಲಿ ೧೭ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಇದರೊಂದಿಗೆ ಹತ್ತಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳಿಸಿದ್ದಾರೆ (Degree result).

ಇದನ್ನು ಓದಿ: competition/ ಶಿಕ್ಷಕರಿಗೆ ಕವನ ರಚನೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ