ಭಟ್ಕಳ ಡೈರಿ ವರದಿ
ಭಟ್ಕಳ: ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ದೇವಿನಗರದಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತೆ ಕೈಗೊಳ್ಳುವ ಮೂಲಕ ಶವಸಂಸ್ಕಾರಕ್ಕೆ ಅನುಕೂಲವಾಗುವಂತೆ ಸಿದ್ಧತೆ ಮಾಡಲಾಗಿದೆ.
ಜಾಲಿ ಪಟ್ಟಣ ಪಂಚಾಯಿತಿ ಸದಸ್ಯ ದಯಾ ನಾಯ್ಕ ಅವರ ಮುತುವರ್ಜಿಯಲ್ಲಿ ಈ ಸ್ವಚ್ಛತಾ ಕಾರ್ಯ ನಡೆದಿದ್ದು, ಪಟ್ಟಣ ಪಂಚಾಯಿತಿಯ ಜೆಸಿಬಿ ಯಂತ್ರವನ್ನು ಬಳಸಿ ರುದ್ರಭೂಮಿಯಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಲಾಯಿತು.
ಮಳೆಗಾಲದಲ್ಲಿ ಸ್ಮಶಾನದ ಆವರಣದಲ್ಲಿ ಗಿಡಗಂಟಿಗಳು ದಟ್ಟವಾಗಿ ಬೆಳೆದಿದ್ದರಿಂದ ಶವಸಂಸ್ಕಾರ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಸಾರ್ವಜನಿಕರ ಅಗತ್ಯಕ್ಕೆ ಸ್ಪಂದಿಸಿ ರುದ್ರಭೂಮಿಯ ಸ್ವಚ್ಛತೆಗೆ ಮುಂದಾದ ದಯಾ ನಾಯ್ಕ ಅವರ ಸೇವಾ ಕಾರ್ಯಕ್ಕೆ ಸ್ಥಳೀಯರಿಂದ ಶ್ಲಾಘನೆ ವ್ಯಕ್ತವಾಗಿದೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ನಾಳೆ ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ
ಹೆಬಳೆ ಗಾಂಧಿನಗರದಲ್ಲಿ ಓಸಿ ಜುಗಾರಾಟ: ೨೭ ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು




