ಭಟ್ಕಳ: ಬೆಂಗಳೂರು (Bengaluru) ನಗರದ ಕೋರಮಂಗಲದಲ್ಲಿರುವ ೩ನೇ ಪಡೆ ಕೆಎಸ್‌ಆರ್‌ಪಿ (KSRP) ಮೈದಾನದಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಗೌರವ ಪ್ರದಾನ ಹಾಗೂ ಪಥಸಂಚಲನ ಸಮಾರಂಭದಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ದೀಪಕ ನಾಯ್ಕ ಅವರು ೨೦೨೫–೨೬ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ (DG & IGP) ಶ್ಲಾಘನಾ ಚಿನ್ನದ ಪದಕ (Gold Medal) ಸ್ವೀಕರಿಸಿ ಜಿಲ್ಲೆಯ ಹೆಮ್ಮೆಗೆ ಪಾತ್ರರಾದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಗುರುತಿಸಿಕೊಂಡಿರುವ ದೀಪಕ ನಾಯ್ಕ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣಗಳ ತನಿಖೆ, ಆರೋಪಿಗಳ ಪತ್ತೆ ಹಾಗೂ ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಲ್ಲಿ ಅವರು ಸಲ್ಲಿಸಿರುವ ಸೇವೆ ಇಲಾಖೆಯ ಮೆಚ್ಚುಗೆಗೆ ಪಾತ್ರವಾಗಿದೆ.
Ekadashi/ ಲಕ್ಷತುಳಸಿ ಅರ್ಚನೆ, ಸ್ವರ್ಣ ಪಾದುಕಾ ಭಿಕ್ಷೆ ಸಂಪನ್ನ
ಭಟ್ಕಳ (Bhatkal) ತಾಲೂಕಿನ ಹಾಡುವಳ್ಳಿಯಲ್ಲಿ ನಡೆದ ಬಹುಚರ್ಚಿತ ನಾಲ್ವರು ಹತ್ಯೆ ಪ್ರಕರಣದ ತನಿಖೆಯಲ್ಲಿಯೂ ದೀಪಕ ನಾಯ್ಕ ಅವರು ಪ್ರಮುಖ ಪಾತ್ರ ವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಕ್ರೂಢೀಕರಿಸುವುದು, ನ್ಯಾಯಾಲಯದ ವಿಚಾರಣೆ ವೇಳೆ ಸಾಕ್ಷಿದಾರರ ಸಮನ್ವಯ ಹಾಗೂ ದಾಖಲೆಗಳ ನಿರ್ವಹಣೆಯಲ್ಲಿ ಅವರು ವಹಿಸಿದ ಜವಾಬ್ದಾರಿಯುತ ಪಾತ್ರವು ಪ್ರಕರಣದ ಯಶಸ್ವಿ ವಿಚಾರಣೆಗೆ ನೆರವಾಯಿತು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಅವರ ಕೊಡುಗೆ ಮಹತ್ವದ್ದಾಗಿದ್ದು, ಕಾರವಾರದ (Karwar) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ತನ್ನ ತೀರ್ಪಿನಲ್ಲಿ ಅವರ ಸೇವೆಯನ್ನು ವಿಶೇಷವಾಗಿ ಪ್ರಶಂಸಿಸಿತ್ತು.
felicitation/ ಆಟೋ ಚಾಲಕರ-ಮಾಲಕರ ಸಂಘದಿಂದ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಸನ್ಮಾನ
ಅಪರಾಧ ತನಿಖಾ ಕ್ಷೇತ್ರದಲ್ಲಿನ ಕಾರ್ಯದಕ್ಷತೆ, ಕರ್ತವ್ಯಪ್ರಜ್ಞೆ ಹಾಗೂ ಪೊಲೀಸ್ ಸೇವೆಯಲ್ಲಿ ಸಲ್ಲಿಸಿದ ವಿಶೇಷ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು ಅವರಿಗೆ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಶ್ಲಾಘನಾ ಚಿನ್ನದ ಪದಕ (gold medal) ನೀಡಿ ಗೌರವಿಸಿದೆ.
Punyatithi/ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮಿ ಪುಣ್ಯತಿಥಿ ಸಂಪನ್ನ

