ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ಹೊನ್ನಗದ್ದೆಯಲ್ಲಿ ಹೆಂಡತಿ ಸಾವಿನಿಂದ ಬೇಸರಗೊಂಡಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ (farewell to life).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೃತರನ್ನು ಮಂಜುನಾಥ ಈರಪ್ಪ ನಾಯ್ಕ (೬೪) ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ತಮ್ಮ ಹೆಂಡತಿ ನಿಧನದ ಬಳಿಕ ಜೀವನದಲ್ಲಿ ನಿರಾಸೆಗೊಂಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಅವರು ಮನೆಯ ಸಮೀಪದ ಅರಣ್ಯ ಪ್ರದೇಶದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (farewell to life) ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೃತರ ಮಗ ಪಾಂಡುರಂಗ ನಾಯ್ಕ (೩೮) ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ (case filed) ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: minor rescued/ ಅಪಹರಣಕ್ಕೊಳಗಾಗಿದ್ದ ಅಪ್ರಾಪ್ತೆ ರಕ್ಷಣೆ; ಇಬ್ಬರ ಬಂಧನ



