ಭಟ್ಕಳ: ಬೈಲೂರು ಕ್ಲಸ್ಟರ್ ನಲ್ಲಿ ಬರುವ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವಷ್ಟು ನೋಟ್ ಬುಕ್ಗಳನ್ನು (Notebooks) ಮುಂಬೈನ (Mumbai) ಸದ್ಗುರು ಅನಿರುದ್ಧ ಬಾಪು ಟ್ರಸ್ಟ್ ವತಿಯಿಂದ ವಿತರಿಸಲಾಯಿತು (Distribution).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೈಲೂರಿನ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆದ ನೋಟ್ ಬುಕ್ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿ ಕೇಶವ ಬಲ್ಸೆ ಮಾತನಾಡಿ, ಈ ಭಾಗದ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತನಾಗಬಾರದು ಎಂಬುದು ಸದ್ಗುರು ಅನಿರುದ್ಧ ಬಾಪು ಅವರ ಆಶಯವಾಗಿದ್ದು, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಮಹತ್ವದ ಯೋಜನೆ ಜಾರಿಯಾಗಿದೆ ಎಂದು ತಿಳಿಸಿದರು.
Punctuality/ ಚಲಿಸುವ ರೈಲಿನಿಂದ ಬಿದ್ದ ಯುವಕನ ಪ್ರಾಣ ಉಳಿಸಿದ ಸಿಬ್ಬಂದಿ
ಪ್ರೌಢ ವಿಭಾಗದ ಮುಖ್ಯಾಧ್ಯಾಪಕಿ ಸುಜಾತ ಟಿ ಹೋರ್ಟಾ ಮಾತನಾಡಿ, ಬಡ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಭಗವಂತ ಹಲವು ರೂಪಗಳಲ್ಲಿ ಬಂದು ಸಹಾಯ ಮಾಡುತ್ತಾನೆ ಎಂಬುದಕ್ಕೆ ಸದ್ಗುರು ಅನಿರುದ್ಧ ಬಾಪು ಅವರೇ ಜೀವಂತ ಉದಾಹರಣೆಯಾಗಿದ್ದಾರೆ. ಈ ಭಾಗದ ಮಕ್ಕಳ ಮೇಲಿನ ಅಪಾರ ಪ್ರೀತಿ ಹಾಗೂ ಅವರು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಹೆಸರು ಮತ್ತು ಉನ್ನತ ಸ್ಥಾನಮಾನ ಗಳಿಸಬೇಕು ಎಂಬ ಆಶಯದಿಂದ ಈ ಸೇವಾ ಕಾರ್ಯವನ್ನು ಕೈಗೊಂಡಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಪಡೆಯುವಂತಾಗಲಿ ಎಂದು ಹಾರೈಸಿದರು.
Government Hospital road/ ಸರ್ಕಾರಿ ಆಸ್ಪತ್ರೆ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಗಿಡ ನೆಟ್ಟು ಪ್ರತಿಭಟನೆ
ಸಿಆರ್‌ಪಿ ವಿಜಯ ಬಾಳಗಿ ಮಾತನಾಡಿ, ಸಮಾಜದಲ್ಲಿ ಉಳ್ಳವರು ಕೆಲವರಿಗೆ ಸಹಾಯ ಮಾಡುತ್ತಾರೆ. ಆದರೆ ಇಡೀ ಕ್ಲಸ್ಟರ್‌ನ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ವರ್ಷಕ್ಕೆ ಬೇಕಾಗುವಷ್ಟು ನೋಟ್ ಬುಕ್ ಉಚಿತವಾಗಿ ನೀಡುತ್ತಿರುವುದು (Distribution) ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಪ್ರಶಂಸಿಸಿದರು.
Porter assaulted/ ಭಟ್ಕಳ ರೈಲ್ವೆ ನಿಲ್ದಾಣದ ಹಮಾಲಿ ಮೇಲೆ ಹಲ್ಲೆ
ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಉಪಾಧ್ಯಕ್ಷ ರಾಮಾ ನಾಯ್ಕ ಸದ್ಗರುಗಳ ಸೇವಾ ಕಾರ್ಯಕ್ರಮಗಳ ಬಗ್ಗೆ ಸಂತಸಪಟ್ಟರು. ಬೈಲೂರು ಕ್ಲಸ್ಟರ್‌ನ ೧೦ ಕಿರಿಯ ಪ್ರಾಥಮಿಕ ಶಾಲೆಗಳು, ೪ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ೧ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
Competitive Exams/ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಗೈದ ಅನೀಶ್ ನಾಯ್ಕಗೆ ಸನ್ಮಾನ
ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಾಧ್ಯಾಪಕಿ ಗೋಪಿ ಗೊಂಡ ಸ್ವಾಗತಿಸಿದರು. ಪ್ರೌಢ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ಗೌಡ ನಿರೂಪಿಸಿದರು. ಪ್ರಾಥಮಿಕ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಧರ್ಮ ನಾಯ್ಕ ವಂದಿಸಿದರು. ಕಾರ್ಯಕ್ರಮದಲ್ಲಿ ಕ್ಲಸ್ಟರ್‌ನ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Government School/ ಸರ್ಕಾರಿ ಶಾಲೆ ಅಭಿವೃದ್ಧಿಗೆ ಪಣ: ಒಂದಾದ ಹಳೆಯ ವಿದ್ಯಾರ್ಥಿಗಳು
೧೮ ವರ್ಷಗಳಿಂದ ನಿರಂತರ ನೆರವು
ಮುಂಬೈನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ನಂತರ ಆಧ್ಯಾತ್ಮಿಕ ಗುರುಗಳಾಗಿ ಬೆಳೆದ ಅನಿರುದ್ಧ ಬಾಪು ತಮ್ಮ ‘ಶ್ರೀ ಅನಿರುದ್ಧ ಉಪಾಸನಾ ಫೌಂಡೇಶನ್’ ಮೂಲಕ ಸಮಾಜಮುಖಿ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ. ಇವರನ್ನು ಭಕ್ತರು ಪ್ರೀತಿಯಿಂದ “ಬಾಪು” ಎಂದು ಕರೆಯುತ್ತಾರೆ. ಮಾನವೀಯ ಮೌಲ್ಯಗಳು, ಭಕ್ತಿ ಮತ್ತು ನಿಸ್ವಾರ್ಥ ಸೇವೆ ಇವರ ಬೋಧನೆಗಳ ಮುಖ್ಯ ಉದ್ದೇಶವಾಗಿದೆ. ದೂರದ ಮುಂಬೈನಿಂದ ಬೈಲೂರಿನಂತಹ ಕುಗ್ರಾಮದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಲು ಕಳೆದ ೧೮ ವರ್ಷಗಳಿಂದ ಬೈಲೂರು ಕ್ಲಸ್ಟರ್ ನ ಎಲ್ಲಾ ಶಾಲೆಗಳಿಗೂ ಒಂದು ಶೈಕ್ಷಣಿಕ ವರ್ಷಕ್ಕೆ ಬೇಕಾಗುವಷ್ಟು ನೋಟ್ ಬುಕ್ ಗಳನ್ನು ನೀಡುತ್ತಾ ಬಂದಿದ್ದಾರೆ.


