ಬೆಂಗಳೂರು (Bengaluru) : “ಸಿ.ಪಿ.ಯೋಗೇಶ್ವರ (CP Yogeshwar) ಅವರಲ್ಲಿ ಕಾಂಗ್ರೆಸ್ (Congress) ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ (DK Shivakumar) ಅವರು ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕ್ವೀನ್ಸ್ ರಸ್ತೆಯ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡಿದರು. “ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ ಅವರು ಇಂದು ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಇಷ್ಟು ದಿನ ಎನ್ ಡಿಎಯಲ್ಲಿದ್ದರು. ಮತ್ತೆ ಕಾಂಗ್ರೆಸ್ಸಿಗನಾಗಿ ಮುಂದುವರೆಯಬೇಕು ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದರು.
ಇದನ್ನೂ ಓದಿ : ಖರೀದಿ ಮೇಲೆ ಲಕ್ಕಿ ಡ್ರಾ ಕೂಪನ್; ದಾಖಲಾಯ್ತು ದೂರು
“ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರವನ್ನು ಮುಖ್ಯಮಂತ್ರಿಗಳ (CM Siddaramaiah) ಬಳಿ ದೂರವಾಣಿಯಲ್ಲಿ ಚರ್ಚೆ ಮಾಡಿದೆ. ನಂತರ ಪಕ್ಷದ ಎಲ್ಲ ಮುಖಂಡರ ಬಳಿ ಸಮಾಲೋಚನೆ ನಡೆಸಿದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲದೇ ಇರುವ ಕಾರಣಕ್ಕೆ ಬುಧವಾರ (ಇಂದು) ಬೆಳಿಗ್ಗೆಯೇ ಮುಖ್ಯಮಂತ್ರಿಗಳ ನಿವಾಸದಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದೆ. ಇವರ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಗಮನಕ್ಕೆ ತಂದು ಎಲ್ಲರ ಒಪ್ಪಿಗೆ ಮೇರೆಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೀಡಲಾಗಿದೆ” ಎಂದು ಹೇಳಿದರು.
ಇದನ್ನೂ ಓದಿ : ಪರಸ್ತ್ರಿಯೊಂದಿಗೆ ಸಹಬಾಳ್ವೆ ನಡೆಸುತ್ತಿದ್ದವ ನೇಣಿಗೆ ಶರಣು
“ರಾಜಕಾರಣ ಸಾಧ್ಯತೆಗಳ ಕಲೆ. ಮತ್ತೆ ಯೋಗೇಶ್ವರ ಅವರು ಮರಳಿ ಗೂಡಿಗೆ ಬಂದಿದ್ದಾರೆ. ಎಸ್ ಪಿ(SP), ಬಿಜೆಪಿ(BJP), ಸ್ವತಂತ್ರ ಅಭ್ಯರ್ಥಿಯಾಗಿ ಕೆಲಸ ಮಾಡಿದ್ದಾರೆ. ಜೆಡಿಎಸ್ (JDS) ಜೊತೆಗೂ ಜಿಲ್ಲೆಯಲ್ಲಿ ಮೈತ್ರಿ ಮಾಡಿಕೊಂಡು ಎನ್ ಡಿಎ (NDA) ಅಭ್ಯರ್ಥಿಯನ್ನು ಗೆಲ್ಲಿಸಿದ್ದರು. ರಾಜಕೀಯ ಸನ್ನಿವೇಶ ಬದಲಾದ ಕಾರಣಕ್ಕೆ ಮತ್ತೆ ನಮ್ಮೊಡನೆ ಕೈಜೋಡಿಸಿದ್ದಾರೆ” ಎಂದು ಡಿ.ಕೆ.ಶಿವಕುಮಾರ ಹೇಳಿದರು.
ಇದನ್ನೂ ಓದಿ : Home Stay/ ಟೆಂಟ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಒಬ್ಬನ ಮೇಲೆ ಸಂಶಯ
ನಾಳೆ (ಗುರುವಾರ) ನಾಮಪತ್ರ ಸಲ್ಲಿಕೆ : “ಇಂದೇ (ಬುಧವಾರ) ಹೈಕಮಾಂಡ್ ಗೆ ಸ್ಪರ್ಧಿಸುವವರ ಪಟ್ಟಿಯನ್ನು ಕಳುಹಿಸಲಾಗುವುದು. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಟ್ಟಿ ಅಂತಿಮ ಮಾಡುತ್ತಾರೆ. ಚನ್ನಪಟ್ಟಣದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರವನ್ನು ಡಿ.ಕೆ.ಸುರೇಶ (DK Suresh) ಅವರ ಜವಾಬ್ದಾರಿಗೆ ವಹಿಸಲಾಗಿತ್ತು. ಅವರು ಈಗಾಗಲೇ ಖರ್ಗೆ ಅವರ ಬಳಿ ಮಾತನಾಡಿದ್ದಾರೆ. ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯುವ ನಾಮಪತ್ರ ಸಲ್ಲಿಕೆ ವೇಳೆ ಎಲ್ಲರೂ ಭಾಗವಹಿಸಬೇಕು” ಎಂದು ಡಿ.ಕೆ.ಶಿವಕುಮಾರ ಮನವಿ ಮಾಡಿದರು.
ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ವಿಡಿಯೋ ವರದಿ ಸಹಿತ ಇದನ್ನೂ ಓದಿ : Mankal Vaidya/ ಪ್ರತಿ ವಾರ ಭಟ್ಕಳ, ಹೊನ್ನಾವರದಲ್ಲಿ ಜನಸ್ಪಂದನ