ಬೆಂಗಳೂರು (Bengaluru) : ಕರ್ನಾಟಕ (Karnataka) ಪ್ರದೇಶ ಯುವ ಕಾಂಗ್ರೆಸ್ (Youth Congress) ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ (Palace ground) ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ (DCM) ಡಿ.ಕೆ. ಶಿವಕುಮಾರ (DK Shivkumar) ಅವರು ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮಾರ್ಚ್ ೧೭ರಂದು ಸೋಮವಾರ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಇದನ್ನು ಹಾಕಿರುವವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ (DK Shivkumar) ಸೂಚಿಸಿದ್ದಾರೆ. ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ (BBMP) ಆಯುಕ್ತ ತುಷಾರ ಗಿರಿನಾಥ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : Holi/ ಭಟ್ಕಳದಲ್ಲಿ “ಆಮ್ಗೆಲ್‌ ಹೋಳಿ” ಸಂಭ್ರಮ

“ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ. ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿರುವುದಾಗಿ ಡಿ.ಕೆ. ಶಿವಕುಮಾರ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : police raid/ ಗರ್‌ ಗರ್‌ ಮಂಡ್ಲ ಆಡುತ್ತಿದ್ದ ೨೬ ಜನರ ವಿರುದ್ಧ ಪ್ರಕರಣ