ಭಟ್ಕಳ: ತಾಲೂಕು ಸರ್ಕಾರಿ ಆಸ್ಪತ್ರೆಯ (Government hospital) ವೈದ್ಯಾಧಿಕಾರಿ ಡಾ ಅರುಣಕುಮಾರ ವಿರುದ್ಧ ಅನಾಮಧೇಯ ವ್ಯಕ್ತಿಯೊಬ್ಬರು ರಾಜ್ಯ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಗೆ (health department) ವಾಟ್ಸಾಪ್ ಮೂಲಕ ದೂರು ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲಾ ಮಲೇರಿಯಾ ಅಧಿಕಾರಿ ಡಾ ರಮೇಶ ರಾವ್ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು (DMO visit).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದ ಡಿಎಂಒ, ಆಸ್ಪತ್ರೆಯ ಆಡಳಿತ ವ್ಯವಸ್ಥೆ, ವೈದ್ಯಕೀಯ ಸೇವೆ ಹಾಗೂ ದೂರು ಸಂಬಂಧಿತ ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸಿದರು. ದೂರುದಲ್ಲಿನ ಅಂಶಗಳ ಸತ್ಯಾಸತ್ಯತೆ ಪರಿಶೀಲಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಲಾಗಿದೆ ಎಂದು ತಿಳಿದುಬಂದಿದೆ (DMO).
Awareness Program/ ಹೊಸ ಮತದಾರರ ನೋಂದಣಿ ಜಾಗೃತಿ ಕಾರ್ಯಕ್ರಮ
ಡಾ ಅರುಣಕುಮಾರ ವಿರುದ್ಧದ ದೂರಿನ ಹಿನ್ನೆಲೆ ಡಿಎಂಒ ಆಸ್ಪತ್ರೆಗೆ ಆಗಮಿಸಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ರೋಗಿಗಳ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಸೇರಿದರು. ಈ ವೇಳೆ ಹಲವರು ಡಾ ಅರುಣ ಕುಮಾರ ಪರವಾಗಿ ಮಾತನಾಡಿ, ವೈದ್ಯರು ರೋಗಿಗಳಿಗೆ ಸ್ಪಂದಿಸುವ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದು, ಆಸ್ಪತ್ರೆಯ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
private vehicles/ ಖಾಸಗಿ ವಾಹನಗಳ ಮೇಲೆ ಕ್ರಮಕ್ಕೆ ಮುಂದಾದ ಸಾರಿಗೆ ಅಧಿಕಾರಿಗಳು
ಅನಾಮಧೇಯ ದೂರಿನಲ್ಲಿ ಮಾಡಲಾಗಿರುವ ಆರೋಪಗಳು ನಿಜವೇ ಎಂಬುದನ್ನು ದಾಖಲೆಗಳು ಮತ್ತು ವಾಸ್ತವಾಂಶಗಳ ಆಧಾರದ ಮೇಲೆ ಸಮಗ್ರವಾಗಿ ಪರಿಶೀಲಿಸಬೇಕು. ಯಾರ ವಿರುದ್ಧವಾದರೂ ದೂರು ಬಂದಾಗ ಆರೋಪಗಳನ್ನು ಆಧಾರವಾಗಿಸಿಕೊಂಡು ತಕ್ಷಣ ತೀರ್ಮಾನಕ್ಕೆ ಬರುವ ಬದಲು ಸಂಬಂಧಿಸಿದ ಎಲ್ಲ ದಾಖಲೆಗಳು, ಸಿಬ್ಬಂದಿಯ ಹೇಳಿಕೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಆರೋಪಗಳಿಗೆ ಆಧಾರವಿಲ್ಲದಿದ್ದರೆ ದೂರು ಸಲ್ಲಿಸಿರುವ ವ್ಯಕ್ತಿಯ ಉದ್ದೇಶದ ಬಗ್ಗೆಯೂ ಪರಿಶೀಲನೆ ಅಗತ್ಯ ಎಂದು ಹೇಳಿದರು.
Mankal Vaidya/ ಉಪಸಭಾಪತಿ ಹುದ್ದೆಗೆ ಮಂಕಾಳ ವೈದ್ಯ
ವೈದ್ಯರು ಅಥವಾ ಸಿಬ್ಬಂದಿ ವಿರುದ್ಧ ದೂರುಗಳಿದ್ದರೆ ಇಲಾಖೆಯ ನಿಯಮಾನುಸಾರ ತನಿಖೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿ. ಆದರೆ ದೂರು ಅಥವಾ ತನಿಖೆಯ ಪರಿಣಾಮವಾಗಿ ರೋಗಿಗಳಿಗೆ ದೊರೆಯುತ್ತಿರುವ ವೈದ್ಯಕೀಯ ಸೇವೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ಸಾರ್ವಜನಿಕರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ, ನಾರಾಯಣ ಖಾರ್ವಿ, ಪರಮೇಶ್ವರ ನಾಯ್ಕ, ಬಾಬು ನಾಯ್ಕ, ಶಂಕರ್ ನಾಯ್ಕ, ಶ್ರೀಧರ ನಾಯ್ಕ, ಅಪ್ಪು ನಾಯ್ಕ ಮತ್ತಿತರರು ಇದ್ದರು.
