ಭಟ್ಕಳ : ಶನಿವಾರ ಭಟ್ಕಳ ತಾಲೂಕಿಗೆ ಆಗಮಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಿತ್ರಾಪುರದಲ್ಲಿರುವ ಕೆ.ಎನ್‌.ನಾಯ್ಕ (KN Naik) ಅವರ ಮನೆಗೆ ಭೇಟಿ ನೀಡಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಬಂಗಾರಪ್ಪರವರ ಅನುಯಾಯಿಯಾಗಿದ್ದ ಕೆ.ಎನ್‌.ನಾಯ್ಕ (KN Naik) ಭಟ್ಕಳ ತಾ.ಪಂ. ಮಾಜಿ ಅಧ್ಯಕ್ಷರೂ ಆಗಿದ್ದರು. ಶನಿವಾರ ಸಂಜೆ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಉಭಯ ಕುಶಲೋಪರಿ ಜೊತೆಗೆ ಎಸ್‌.ಬಂಗಾರಪ್ಪ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು. ಈ ಸಂದರ್ಭದಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ , ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹಾಗೂ  ಮುಖಂಡರು ಉಪಸ್ಥಿತರಿದ್ದರು. ನಂತರ ಸಚಿವರು ಕರಿಕಲ್‌ ಗ್ರಾಮದ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡಿ ಚಾತುರ್ಮಾಸ್ಯ ನಿರತ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಇದನ್ನೂ ಓದಿ : ಬ್ರಹ್ಮಾನಂದ ಶ್ರೀಗಳ ಆಶೀರ್ವಾದ ಪಡೆದ ಸಚಿವ