ಭಟ್ಕಳ: ಪ್ರತಿಯೊಂದು ಗ್ರಾಮದಲ್ಲಿ ಉದ್ಯೋಗ, ಪ್ರತಿಯೊಂದು ಕುಟುಂಬದಲ್ಲಿ ಆದಾಯ ಭದ್ರತೆ, ಪ್ರತಿಯೊಂದು ಹೊಲಕ್ಕೆ ನೀರು, ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಗೌರವ—ಇವುಗಳ ಸಮನ್ವಯವೇ ನಿಜವಾದ ಅಭಿವೃದ್ಧಿ (developed). ಈ ಆಶಯವನ್ನು ಸಾಕಾರಗೊಳಿಸುವಲ್ಲಿ VB–G RAM–G ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾಯ್ಕಿಣಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಭಟ್ಕಳ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ರಾಜೇಶ ಮಹಾಲೆ ಹೇಳಿದರು. ಅವರು ಕಾಯ್ಕಿಣಿ ಪಂಚಾಯತ್ ಸಭಾಭವನದಲ್ಲಿ ನಡೆದ VB–G RAM–G ಮಾಹಿತಿ ಕಾರ್ಯಾಗಾರದ (workshop) ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾಯ್ಕಿಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ನಾಗರಾಜ ಮಾತನಾಡಿ, VB–G RAM–G ಯೋಜನೆಯ ಮಹತ್ವವು ಉದ್ಯೋಗವನ್ನು ಗ್ರಾಮೀಣ ಅಭಿವೃದ್ಧಿಯೊಂದಿಗೆ ಜೋಡಿಸುವ ಪ್ರಯತ್ನದಲ್ಲಿದೆ. ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸಲು ಜನಸಮುದಾಯ ಕೈಜೋಡಿಸುವ ಅಗತ್ಯವಿದೆ ಎಂದರು.
karate tournament/ ವಿದ್ಯಾಂಜಲಿ ಶಾಲೆಯ ಮೂವರು ರಾಷ್ಟ್ರಮಟ್ಟಕ್ಕೆ ಆಯ್ಕೆ
ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಮುಂಡಳ್ಳಿ ಮಾತನಾಡಿ, “VB–G RAM–G ಕೇವಲ ಕೆಲಸ ನೀಡುವ ಯೋಜನೆಯಾಗಿ ಉಳಿಯದೆ, ಕೆಲಸದ ಮೂಲಕ ಗ್ರಾಮ ನಿರ್ಮಾಣ ಮಾಡುವ ಯೋಜನೆಯಾಗಬೇಕು. ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಸಾಧಿಸಲು ಸಾಮಾಜಿಕ ಪರಿಶೋಧನೆ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಹೇಳಿದರು.
Breastfeeding/ ಅಳ್ವೆಕೋಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
ಗ್ರಾಮ ಪಂಚಾಯತ್ ಕಾರ್ಯದರ್ಶಿ ಈರಪ್ಪ ಬೇವಿನಗಿಡ ಸ್ವಾಗತಿಸಿದರು. ವಿಷ್ಣು ನಾಯ್ಕ ವಂದಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿ ನಾಗವೇಣಿ ನಾಯ್ಕ, ಶ್ರೀನಿವಾಸ ನಾಯ್ಕ, ಈಶ್ವರ ನಾಯ್ಕ, ಕೇಶವ ನಾಯ್ಕ ಹಾಗೂ ಸುಮ ನಾಯ್ಕ ಸಹಕರಿಸಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಯಮುನಾ ನಾಯ್ಕ ಹಾಗೂ ಶಿಲ್ಪಾ ನಾಯ್ಕ ಉಪಸ್ಥಿತರಿದ್ದರು. ಯಶಸ್ವಿಯಾಗಿ ನಡೆದ ಕಾರ್ಯಾಗಾರದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
DMO visit/ ಭಟ್ಕಳ ಆಸ್ಪತ್ರೆ ವೈದ್ಯಾಧಿಕಾರಿ ಡಾ ಅರುಣಕುಮಾರ ಪರ ಸಾರ್ವಜನಿಕರ ಬ್ಯಾಟಿಂಗ್


