ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRP) ವತಿಯಿಂದ ತಾಲೂಕಿನ ಹಿರಿಯಡಕ ಗ್ರಾಮದ ಕರ್ನಾಟಕ ಪಬ್ಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (KPS) ಪರಿಸರ ಜಾಗೃತಿ (Environmental awareness) ಮಾಹಿತಿ ಶಿಬಿರ ಹಾಗೂ ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ವಿಜಯ ಶೆಟ್ಟಿ ಮಾತನಾಡಿ, ಮಕ್ಕಳು ಪರಿಸರ ಸಂರಕ್ಷಣೆ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮುಖ್ಯೋಪಾಧ್ಯಾಯನಿ ರೇಣುಕಾ ಮಾತನಾಡಿ, ಮಕ್ಕಳು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟು ಕೊಳ್ಳಬೇಕು. ಅಲ್ಲದೇ ಪರಿಸರದ ಬಗ್ಗೆ ಕಾಳಜಿ ವಹಿಸಿ ನೆಟ್ಟ ಗಿಡಗಳನ್ನು ಪಾಲನೆ ಪೋಷಣೆ ಮಾಡಬೇಕು ಎಂದು ತಿಳಿಸಿದರು.

Saraf Memorial Award/ ಡಾ ಆರ್ ವಿ ಸರಾಫ್ ಸಂಸ್ಮರಣಾ ಪ್ರಶಸ್ತಿ ಕರಿಯಾ ಗೊಂಡಗೆ ಪ್ರದಾನ: ಯಾರಿವರು ಗೊತ್ತಾ?

ಹಿರಿಯಡ್ಕದ ಗಸ್ತು ಅರಣ್ಯ ಅಧಿಕಾರಿ ಕೇಶವ ಪೂಜಾರಿ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಗಿಡಗಳನ್ನು ನೆಡುವುದರ ಜೊತೆಗೆ ಪಾಲನೆ ಪೋಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರ ಉಳಿಸಿ ಬೆಳೆಸಿ ಎಂದರು. ಯೋಜನೆಯ ಉಡುಪಿ (Udupi) ತಾಲೂಕು ಕೃಷಿ ಮೇಲ್ವಿಚಾರಕ ರಾಮು ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವ ಕುರಿತು ಮಕ್ಕಳಿಂದಲೇ ಜಾಗೃತಗೊಂಡಲ್ಲಿ (Environmental awareness) ಮುಂದಿನ ದಿನಗಳಲ್ಲಿ ನಮ್ಮೆಲ್ಲರಿಗೂ ಶುದ್ಧವಾದ ಗಾಳಿ ಬೆಳಕು ನೀರು ಆರೋಗ್ಯ ವೃದ್ಧಿಯಾಗಲು ಸಾಧ್ಯ ಎಂದು ತಿಳಿಸಿದರು.

Bharat Vibhushan/ ರಾಜಂ ಹಿಚ್ಕಡ ಮುಡಿಗೇರಿದ ಭಾರತ ವಿಭೂಷಣ

ಯೋಜನೆಯ ಹಿರಿಯಡಕ ಒಕ್ಕೂಟದ ಅಧ್ಯಕ್ಷ ಗಣೇಶ ನಾಯ್ಕ ಮಾತನಾಡಿ, ಮರವಿದ್ದರೆ ಮನುಜ ಎಂಬ ಗಾದೆ ಮಾತಿನಂತೆ ಭಾರತೀಯ ಜ್ಞಾನ ಪರಂಪರೆ ವೈಜ್ಞಾನಿಕ ಹಿನ್ನೆಲೆಯಲ್ಲಿ ಪ್ರಕೃತಿ ಮತ್ತು ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು. ಶಾಲಾ ಮಕ್ಕಳಿಗೆ ಪರಿಸರಕ್ಕೆ ಸಂಬಂಧಿಸಿದಂತೆ ಪ್ರಬಂಧ, ಚಿತ್ರ ಕಲೆ, ಪರಿಸರ ಗೀತೆ, ಭಾಷಣ ಕುರಿತು ಸ್ಪರ್ಧೆ ಆಯೋಜನೆ ಮಾಡಿದ್ದು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು ಶೌರ್ಯ ಘಟಕ ತಂಡದವರಿಂದ ಶಾಲಾ ಆವರಣವನ್ನು ಸ್ವಚ್ಛತೆ ಮಾಡಲಾಯಿತು.

AITM/ ಭಟ್ಕಳದ ಎಐಟಿಎಂನಲ್ಲಿ ೪೩ನೇ ಪದವಿ ಪ್ರದಾನ ಸಮಾರಂಭ  

ಯೋಜನೆಯ ವಲಯ ಮೇಲ್ವಿಚಾರಕ ರಾಜು ಕಾರ್ಯಕ್ರಮವನ್ನು ನಿರ್ವಹಿಸಿದರು. ಸೇವಾ ಪ್ರತಿನಿಧಿ ಯಶೋಧ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶುಭಾ ಶೆಟ್ಟಿ ವಂದಿಸಿದರು ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ಘಟಕ ತಂಡದವರು, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

campaign/ ಮನೆಗೊಂದು ಗಿಡ ಅಭಿಯಾನಕ್ಕೆ ಚಾಲನೆ