ಕಾರವಾರ: ಕುಮಟಾದ ಕೊಂಕಣ ಶಿಕ್ಷಣ ಸಂಸ್ಥೆಯಿಂದ ಸಿವಿಎಸ್ಕೆ ಹೈಸ್ಕೂಲ್ನ ಅಟಲ್ ಟಿಂಕರಿಂಗ್ ಲ್ಯಾಬ್ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಎಕ್ಷಪೋ-2024(EXPO-2024) ಆಯೋಜಿಸಲಾಗಿತ್ತು.
ಇದನ್ನೂ ಓದಿ : ಸರ್ಕಾರಿ ನೌಕರರ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ
ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳ ಈ ಎಕ್ಷಪೋ-2024(EXPO-2024) ಪ್ರದರ್ಶನವನ್ನು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವಿಡಿಯೋ ನೋಡಿ : ಸರ್ಕಾರಿ ನೌಕರರ ವಾಲಿಬಾಲ್ ಪಂದ್ಯಾವಳಿ https://fb.watch/qu-nv-gFjw/?mibextid=Nif5oz
ನಂತರ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿ ಅತ್ಯುತ್ತಮ ಸಾಧನೆಯ ಮೂಲಕ ಹೆಸರಾಗಿರುವ ಡಾ. ಎಪಿಜೆ ಅಬ್ದುಲ್ ಕಲಾಂ, ಡಾ. ಬಿ.ಆರ್. ಅಂಬೇಡ್ಕರ್, ಸರ್ ಸಿ.ವಿ. ರಾಮನ್, ಸಚಿನ್ ತೆಂಡೂಲ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳಡಿ ಮಕ್ಕಳು ಶಾಲಾ ಹಂತದಿಂದಲೇ ಶ್ರೇಷ್ಠ ಗುರಿ ಸಾಧನೆಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಪಾಲಕರ ಹಾಗೂ ಶಿಕ್ಷಕರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕು. ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಸಾಧನೆಯ ಮೂಲಕ ಸೂಕ್ತ ಮಾರ್ಗಗಳನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಮಕ್ಕಳು ಸಮಾಜದಲ್ಲಿ ಶ್ರೇಷ್ಠ ಸಾಧನೆಗೈದ ಮಹನೀಯರ ಮಾರ್ಗದರ್ಶನ, ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಲ್ಯದಿಂದಲೇ ಉತ್ತಮವಾದ ಗುರಿ ಇಟ್ಟುಕೊಂಡು ಆ ಗುರಿ ಸಾಧನೆಗೆ ಪೂರಕವಾಗಿ, ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಈ ರೀತಿಯಾಗಿ ಮನೋಭಾವದಿಂದ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿದೆ ಎಂದರು.
ಈ ಸಂದರ್ಭದಲ್ಲಿ ಕೊಂಕಣ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಇದ್ದರು.