ಹುಬ್ಬಳ್ಳಿ (Hubballi) : ಕ್ಷುಲ್ಲಕ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (family fights) ನಡೆದು ಓರ್ವ ಗಂಭೀರವಾಗಿ ಗಾಯಗೊಂಡು ಮತ್ತೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅರ್ಬಾಜ್ ಮುಜಾವರ್ ಗಾಯಗೊಂಡ ವ್ಯಕ್ತಿ. ಅಲ್ತಾಫ್ ಬೇಪಾರಿ, ಸಾಹಿಲ್ ಬೇಪಾರಿ, ಸೋಹೇಲ್, ತನ್ವೀರ್ ಹಲ್ಲೆ ಮಾಡಿದವರಾಗಿದ್ದಾರೆ. ಕಟ್ಟಿಗೆ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು  ಅರ್ಬಾಜ್ ಮುಜಾವರಗೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ (family fights).

ವಿಡಿಯೋ ಸಹಿತ ಇದನ್ನೂ ಓದಿ : ಇಬ್ಬರು ಮಕ್ಕಳ ಮೃತದೇಹ ಪತ್ತೆ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಹರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಮ್.ತಹಶಿಲ್ದಾರ ಆಗಮಿಸಿದ್ದಾರೆ. ಘಟನೆ ಬಗ್ಗೆ ಪರಿಶೀಲನೆ ನಡೆಸಿ, ಮುಂದಿನ ಕಾನೂನಾತ್ಮಕ ಕ್ರಮ ಕೈಗೊಂಡಿದ್ದಾರೆ.

ವಿಡಿಯೋ ಸಹಿತ ಇದನ್ನೂ ಓದಿ : ಮೀನು ಹಿಡಿಯಲು ಹೋಗಿದ್ದ ತಂದೆ, ಮಕ್ಕಳು ನೀರುಪಾಲು