ಭಟ್ಕಳ: ತಾಲೂಕ ಪಂಚಾಯತಿಯಲ್ಲಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮತ್ತು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಇಒ ವಿ.ಡಿ.ಮೊಗೇರ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು (farewell). ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ಹಾಗೂ ನೌಕರರ ವತಿಯಿಂದ ಈ ಕಾರ್ಯಕ್ರಮ ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ತಾಲೂಕ ಪಂಚಾಯತಿ ಸಭಾಭವನದಲ್ಲಿ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಪ್ರಭಾರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟ್ರಮಣ ದುರ್ಗಪ್ಪ ಮೊಗೇರ ಅವರನ್ನು ಬೀಳ್ಕೊಡಲಾಯಿತು. ಜೊತೆಗೆ ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕರಾಗಿದ್ದ, ಹಿಂದೆ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದ ಕಾರವಾರಕ್ಕೆ ವರ್ಗಾವಣೆಗೊಳ್ಳುತ್ತಿರುವ ಪ್ರಭಾಕರ ಸೈರು ಚಿಕ್ಕನ್ಮನೆ ಅವರನ್ನೂ ಬೀಳ್ಕೊಡಲಾಯಿತು(farewell). ಇಬ್ಬರಿಗೂ ಶಾಲು ಹೊದಿಸಿ, ಫಲ ತಾಂಬೂಲದೊಂದಿಗೆ ಸ್ಮರಣಿಕೆಯನ್ನಿಟ್ಟು ಸತ್ಕರಿಸಲಾಯಿತು.
ವಿಡಿಯೋ ಸಹಿತ ಇದನ್ನೂ ಓದಿ : ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ
ಸಮಾರಂಭದ ಅಧ್ಯಕ್ಷತೆಯನ್ನು ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ, ತಾಪಂನ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ ವಹಿಸಿದ್ದರು. ಪಂಚಾಯತ ರಾಜ್ ಇಂಜಿನಿಯರಿಂಗ್ ಉಪ- ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಮಲ್ಲಪ್ಪ ಮಡಿವಾಳ ಉಪಸ್ಥಿತರಿದ್ದರು. ವ್ಯವಸ್ಥಾಪಕಿ ಲತಾ ನಾಯ್ಕ ಸ್ವಾಗತಿಸಿದರು. ರಾಘವೇಂದ್ರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಕರಿಯಪ್ಪ ನಾಯ್ಕ ವಂದಿಸಿದರು.
ಇದನ್ನೂ ಓದಿ : ಶರಾವತಿ ನದಿಪಾತ್ರದ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ವಸತಿ