ಭಟ್ಕಳ(Bhatkal): ಗರ್ಭಕೋಶದಲ್ಲಿ (womb) ಮಲಮತ್ತ(Placenta) ಸುತ್ತಿಕೊಂಡು ಅಪಾಯಕಾರಿ ಸ್ಥಿತಿಯಲಿದ್ದ ಮಹಿಳೆಯನ್ನು ಬುಧವಾರ ಭಟ್ಕಳ ತಾಲೂಕು ಆಸ್ಪತ್ರೆಯ (Government Hospital) ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ (Surgery) ನಡೆಸಿ ಮಹಿಳೆ ಹಾಗು ಮಗುವಿನ ಪ್ರಾಣವನ್ನು ಕಾಪಾಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ ತಾಲೂಕಿನ ಶಿರಾಲಿ ನಿವಾಸಿ ೩೪ ವರ್ಷದ ಮಹಿಳೆಯೊರ್ವಳು ತನ್ನ ಎರಡನೇ ಗರ್ಭಪ್ರಸವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಮಲಮತ್ತು (fecal matter) ಪತ್ತೆಯಾಗಿದೆ. ವೈದ್ಯರು ಮಣಿಪಾಲ ಇಲ್ಲವೇ ಮಂಗಳೂರಿಗೆ ತೆರಳುವಂತೆ ಸೂಚಿಸಿದ್ದರು. ಆದರೆ ಆಕೆಯ ಕುಟುಂದವರು ಆಕೆಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ತಾಲೂಕು ಆಸ್ಪತ್ರೆಯ ಆಡಳಿತ ವೈದಾಧಿಕಾರಿ ಡಾ. ಸವಿತಾ ಕಾಮತ ಅವರನ್ನು ಎಂ.ಆರ್.ಐ. ಸ್ಕ್ಯಾನಿಂಗ್ ತಪಾಸಣೆ ಮಾಡಿದ್ದನ್ನು ಖಚಿತಪಡಿಸಿಕೊಂಡಿದ್ದರು. ಶಸ್ತ್ರಚಿಕಿತ್ಸೆಯ ಗಂಭೀರತೆ ಅರಿತು, ಅದರ ಅಪಾಯದ ಮನ್ಸೂಚನೆಯನ್ನು ಕುಟುಂಬದವರಿಗೆ ನೀಡಲಾಗಿತ್ತು.
ಇದನ್ನೂ ಓದಿ : ವಿಹಿಪಂ ಷಷ್ಠಿಪೂರ್ತಿ ಸಮಾರಂಭ ಆ.೩೦ರಂದು
ಪ್ರಸೂತಿ ತಜ್ಞೆ ಡಾ. ಶಮ್ಸನೂರ್ ಅವರ ನೇತೃತ್ವದಲ್ಲಿ ೧ ಗಂಟೆಯ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಯ ಗರ್ಭಕೋಶವನ್ನು ಸಂಪೂರ್ಣ ಹೊರತೆಗೆದು ತಾಯಿ ಮತ್ತು ಮಗು ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ. ಮಗು ೧.೪ ಕೆ.ಜಿ. ತೂಕ ಹೊಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಎನ್ಐಸಿಯು ನಿಗಾದಲ್ಲಿ ಇರಿಸಲಾಗಿದೆ ಎಂದು ಮಕ್ಕಳ ತಜ್ಞ ಡಾ. ಸುರಕ್ಷಿತ ಶೆಟ್ಟಿ ತಿಳಿಸಿದರು.
ಇದನ್ನೂ ಓದಿ : ಕ್ರೀಡಾ ಲೋಕದ ದಂತಕಥೆ ಮೇಜರ್ ಧ್ಯಾನ್ಚಂದ್
ಮಹಿಳೆಯ ಗರ್ಭಧಾರಣೆ ಸಂದರ್ಭದಲ್ಲಿ ಕಂಡುಬರುವ ಅಪರೂಪದ ಪ್ರಕರಣ ಇದಾಗಿದೆ. ಇಂತಹ ಸನ್ನಿವೇಶದಲ್ಲಿ ಮಹಿಳೆಯರು ತೀವ್ರ ರಕ್ತಸ್ರಾವವಾಗಿ ಮರಣ ಹೊಂದುತ್ತಾರೆ. ತಾಲೂಕು ಆಸ್ಪತ್ರೆಯಲ್ಲಿ ೨೫ ವರ್ಷಗಳ ನಂತರ ಇಂತಹ ಪ್ರಕರಣವನ್ನು ನಮ್ಮ ವೈದ್ಯರ ತಂಡ ಒಂದು ಗಂಟೆಯ ಯಶ್ವಸಿ ಶಸ್ತ್ರಚಿಕಿತ್ಸೆ ನಡೆಸಿ, ತಾಯಿ ಮತ್ತು ಮಗು ಇಬ್ಬರನ್ನು ಬದುಕಿಸಿದ್ದಾರೆ ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ತಿಳಿಸಿದರು.
ಇದನ್ನೂ ಓದಿ : ವಿಶೇಷ ಮಕ್ಕಳಿಗೆ ಸೊಲ್ಲಾಪುರ ಚಾದರ ವಿತರಣೆ
ಸುದ್ದಿಗೋಷ್ಠಿಯಲ್ಲಿ ವೈದ್ಯರಾದ ಡಾ.ಅರುಣಕುಮಾರ, ಡಾ.ಪವನ, ಡಾ.ಮಹಾಂತೇಶ ಇದ್ದರು.
ಸುದ್ದಿಗೋಷ್ಠಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದಾಗಿದೆ.