ಭಟ್ಕಳ: ಆಯುಷ್ಮಾನ್ ಭಾರತ ಹಾಗೂ ಆರೋಗ್ಯ ಕರ್ನಾಟಕ (ಎಬಿ-ಎಆರ್‌ಕೆ) ಯೋಜನೆಯ ರಾಜ್ಯಮಟ್ಟದ ಪ್ರಗತಿ ಮೌಲ್ಯಮಾಪನದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆ (Bhatkal hospital) ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಪ್ರಥಮ ಹಾಗೂ ರಾಜ್ಯದಲ್ಲಿ ೩೭ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ ಹಿನ್ನೆಲೆ, ಭಟ್ಕಳ ಆಟೋ (auto) ಚಾಲಕರ-ಮಾಲಕರ ಸಂಘದ ವತಿಯಿಂದ ಸರ್ಕಾರಿ ಆಸ್ಪತ್ರೆಯ (government hospital) ವೈದ್ಯರು (doctors) ಹಾಗೂ ಸಿಬ್ಬಂದಿಯನ್ನು ಗೌರವಿಸಲಾಯಿತು (felicitation).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸಂಘದ ವತಿಯಿಂದ ಆಡಳಿತ ವೈದ್ಯಾಧಿಕಾರಿ ಡಾ ಅರುಣಕುಮಾರ, ಮಕ್ಕಳ ತಜ್ಞ ಡಾ ಸುರಕ್ಷಿತ ಶೆಟ್ಟಿ ಹಾಗೂ ಸಿಬ್ಬಂದಿ ವಿಶ್ವನಾಥ ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು (felicitation). ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ನಾಯ್ಕ ಮತ್ತು ಈಶ್ವರ ನಾಯ್ಕ, ಸದಸ್ಯ ಫಯಾಜ್, ಪ್ರಧಾನ ಕಾರ್ಯದರ್ಶಿ ಮಾದೇವ ನಾಯ್ಕ, ಖಜಾಂಚಿ ಲೋಕೇಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Punyatithi/ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮಿ ಪುಣ್ಯತಿಥಿ ಸಂಪನ್ನ