ಭಟ್ಕಳ (Bhatkal): ಇಲ್ಲಿನ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೨೦೨೪-೨೫ನೇ ಸಾಲಿನ ಎಸ್ ಎಸ್ ಎಲ್ ಸಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ (felicitation ceremony) ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ ಡಿ ಬಿ ನಾಯ್ಕ, ಕನ್ನಡ ನಾಡು -ನುಡಿಯ ಅಭಿಮಾನ ಸದಾ ಜೀವಂತವಾಗಿರಬೇಕು ಎಂದು ನುಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ಈ ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಕನ್ನಡಿಗರ ಪ್ರಾಥಮಿಕ ಸಂಸ್ಥೆಯಾದ ಸಾಹಿತ್ಯ ಪರಿಷತ್ತು ನೀಡುವ ಪುರಸ್ಕಾರಕ್ಕೆ ತನ್ನದೇ ಆದ ಘನತೆ ಇದೆ. ಮುಂದಿನ ಬದುಕಲ್ಲಿ ಉತ್ತಮ ಸಾಧನೆಯನ್ನು ಮಾಡುವುದರ ಜೊತೆಗೆ ಎಷ್ಟೇ ಎತ್ತರಕ್ಕೇರಿದರು ನಮ್ಮೊಳಗಿನ ಕನ್ನಡತನವನ್ನು ಎಂದಿಗೂ ಕಾಪಾಡಿಕೊಳ್ಳಬೇಕು ಎಂದು ನುಡಿದರು.
ಇದನ್ನು ಓದಿ: Brothers challenge/ ಮುರ್ಡೇಶ್ವರದಲ್ಲಿ ಸಹೋದರರ ಸವಾಲ್
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ ಪ್ರಶಂಸನಾ ಪತ್ರ ಪ್ರದಾನ ಮಾಡಿದರು. ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ, ಸಾಹಿತಿ ಮಾನಾಸುತ ಶಂಭು ಹೆಗಡೆ, ಸ್ಪಂದನ ಸಂಸ್ಥೆಯ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಸಾಹಿತಿ ನಾರಾಯಣ ಯಾಜಿ ಶಿರಾಲಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯಕ, ಆನಂದಾಶ್ರಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ವಿನುತಾ ಡಿಸೋಜ, ಹೊನ್ನಾವರ ತಾಲೂಕ ಕಸಾಪ ಅಧ್ಯಕ್ಷ ಎಸ್.ಎಚ್. ಗೌಡ ಉಪಸ್ಥಿತರಿದ್ದರು.
ಇದನ್ನು ಓದಿ: Youths in police custody/ ಬೆಂಗಳೂರಿನ ಯುವಕರಿಬ್ಬರು ಮುರುಡೇಶ್ವರ ಪೊಲೀಸ್ ವಶಕ್ಕೆ
ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ, ಉತ್ತರ ಕನ್ನಡ ಜಿಲ್ಲೆಯಾದ್ಯoತ ಕನ್ನಡ ಭಾಷೆಗೆ ಪೂರ್ಣಾಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಪುರಸ್ಕರಿಸುವ ಕಾರ್ಯಕ್ರಮದ (felicitation ceremony) ಮೂಲಕ ಇಡೀ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕನ್ನಡದ ಡಿಂಡಿಮ ಮೊಳಗುತ್ತಿದೆ. ಕನ್ನಡ ಭಾಷೆಗೆ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದಿಸುವ ಕಾರ್ಯಕ್ರಮ ವಿಶಿಷ್ಟವಾದುದು ಎಂದರು.
ಇದನ್ನು ಓದಿ: Chain snatching attempt/ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಎಗರಿಸಲು ಯತ್ನ
ಕಸಾಪ ಗೌರವಕೋಶಾಧ್ಯಕ್ಷ ಶ್ರೀಧರ ಶೇಟ ಸ್ವಾಗತಿಸಿದರೆ, ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ ನಿರೂಪಿಸಿದರು. ಗಣೇಶ ಯಾಜಿ ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪೆಟ್ರಿಕ್ ಟೆಲಿಸ್, ಪೂರ್ಣಿಮಾ ಮುರುಡೇಶ್ವರ, ಗಣೇಶ್ ಕೃಷ್ಣ ಮೊಗೇರ, ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು
ಇದನ್ನು ಓದಿ: Young man arrested/ ಮುರುಡೇಶ್ವರದಲ್ಲಿ ಅಳ್ವೆಕೋಡಿ ಯುವಕ ವಶಕ್ಕೆ
ಆರಂಭದಲ್ಲಿ ಇತ್ತೀಚಿಗೆ ನಿಧನರಾದ ನ್ಯೂ ಇಂಗ್ಲಿಷ್ ಶಾಲೆಯ ಮುಖ್ಯಾಧ್ಯಾಪಕ ವಿ. ಜಿ. ನಾಯ್ಕ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ೭೫ ವಿದ್ಯಾರ್ಥಿಗಳು ಹಾಗೂ ೧೮ ಭಾಷಾ ಶಿಕ್ಷಕರು, ಸಾಹಿತಿ ಮನಾಸುತ ಶಂಭು ಹೆಗಡೆ, ಆನಂದಾಶ್ರಮ ಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟೆರ್ ವಿನುತಾ ಡಿಸೋಜ ಅವರನ್ನು ಅಭಿನಂದಿಸಲಾಯಿತು.
ಇದನ್ನು ಓದಿ: Police raid in lodge/ ಮುರುಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ



