ಕಾರವಾರ (Karwar) : ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕುವವರೇ ಎಚ್ಚರ! ಅಂಥವರ ವಿರುದ್ಧ ಇನ್ನು ಮುಂದೆ ಎಫ್ಐಆರ್ (FIR) ದಾಖಲಾಗಲಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ (Urban local body) ವ್ಯಾಪ್ತಿಯಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿ (National Highway) ಪಕ್ಕದಲ್ಲಿ ಕಸ ಹಾಕುವವರ ವಿರುದ್ಧ ಗರಿಷ್ಠ ಮಟ್ಟದ ದಂಡ ವಸೂಲಿ ಮಾಡುವುದರ ಜೊತೆಗೆ ಪೊಲೀಸ್ ಪ್ರಕರಣವನ್ನು (FIR) ದಾಖಲಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಖಡಕ್ ಸೂಚನೆ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ, ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ (Waste disposal) ಹಾಗೂ ಪ್ಲಾಸ್ಟಿಕ್ ನಿಯಂತ್ರಣ (Plastic control) ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ (task force) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನು ಓದಿ : Intense sun/ ಕರಾವಳಿಯಲ್ಲಿ ತೀವ್ರ ಬಿಸಿಲು; ಎಲ್ಲೆಲ್ಲಿ ಎಷ್ಟು ಗೊತ್ತಾ?
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಸಿಸಿಟಿವಿ (CCTV) ಅಳವಡಿಸುವ ಮೂಲಕ ಮತ್ತು ನಗರಸಭೆ ಸಿಬ್ಬಂದಿಯಿಂದ ನಿರಂತರವಾಗಿ ನಿಗಾ ವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಪತ್ತೆ ಹಚ್ಚಬೇಕು. ಕಸ ಹಾಕುವವರಿಗೆ ಗರಿಷ್ಠ ಮಟ್ಟದ ದಂಡವನ್ನು ವಿಧಿಸುವ ಜೊತೆಗೆ ಸಾರ್ವಜನಿಕ ಸ್ಥಳವನ್ನು ವಿರೂಪಗೊಳಿಸಿದ ಕುರಿತಂತೆ ಪ್ರಕರಣವನ್ನು ದಾಖಲಿಸಿ. ಪ್ರಕರಣ ದಾಖಲಿಸಿದ ಮತ್ತು ದಂಡ ಸಂಗ್ರಹಿಸಿದ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನು ಓದಿ : Liquor ban/ ಮದ್ಯ ಮಾರಾಟ ನಿಷೇಧ; ಎಲ್ಲೆಲ್ಲಿ, ಯಾವಾಗ ಗೊತ್ತಾ?
ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಯಲ್ಲಿ ತ್ಯಾಜ್ಯ ಕಂಡು ಬಂದಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೆದ್ದಾರಿಯಲ್ಲಿ ಪ್ರವಾಸಿಗರಿಗಿಂತ (tourist) ಸ್ಥಳೀಯರಿಂದಲೇ ಹೆಚ್ಚಿನ ಪ್ರಮಾಣದ ತ್ಯಾಜ್ಯ ಸಂಗ್ರಹವಾಗುತ್ತಿದೆ. ನಗರ ಪ್ರದೇಶದಲ್ಲಿ ಕಸ ಹಾಕುವ ಪ್ರದೇಶದಲ್ಲಿನ ಅಕ್ಕಪಕ್ಕದ ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿ. ಕಸ ಹಾಕುವವರನ್ನು ಗುರುತಿಸಿ ಕ್ರಮ ಕೈಗೊಳ್ಳಿ ಎಂದರು.
ವಿಡಿಯೋ ಸಹಿತ ಇದನ್ನು ಓದಿ : Havaldar suspend/ ಶಿರಸಿ ಹೆಡ್ ಕಾನಸ್ಟೇಬಲ್ ಅಮಾನತು
ಜಿಲ್ಲೆಯಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಣೆಯನ್ನು ವ್ಯವಸ್ಥಿತವಾಗಿ ಸಂಗ್ರಹಿಸಬೇಕು, ಸಂಗ್ರಹಿಸಿದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಂಗಡಣೆ ಮಾಡಿ ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಬೇಕು. ಹಸಿ ಕಸದಿಂದ ಕಾಂಪೋಸ್ಟ್ ತಯಾರಿಕೆಗೆ ಆದ್ಯತೆ ನೀಡಬೇಕು. ಒಣ ಕಸವನ್ನು ಸಂಸ್ಕರಿಸಿ ಮಾರಾಟ ಮಾಡಬೇಕು. ಮನೆಗಳಲ್ಲಿ ಸಂಗ್ರಹವಾಗುವ ಹಸಿಕಸವನ್ನು ಮನೆಗಳಲ್ಲಿಯೇ ವಿಲೇವಾರಿ ಮಾಡುವ ಬಗ್ಗೆ ಸಾರ್ವಜನಿಕರನ್ನು ಪ್ರೋತ್ಸಾಹಿಸಬೇಕು ಎಂದರು.
ಇದನ್ನು ಓದಿ : Appeal / ಸಮರ್ಪಕ ಪಾರ್ಕಿಂಗ್‌ಗಾಗಿ ಮನವಿ
ಇ-ತ್ಯಾಜ್ಯ (E-waste) ಸಂಗ್ರಹಣೆ ಕುರಿತಂತೆ ಅರಿವು ಮೂಡಿಸಿ, ಆಭಿಯಾನ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು. ಈ ತಿಂಗಳ ಅಂತ್ಯಕ್ಕೆ ಸಂಗ್ರಹಿಸಿದ ಇ-ತ್ಯಾಜ್ಯದ ವಿವರಗಳನ್ನು ನೀಡಬೇಕು. ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ಈ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ (PCB) ವತಿಯಿಂದ ನಿರಂತರವಾಗಿ ದಾಳಿ ನಡೆಸಬೇಕು. ಏಕ ಬಳಕೆ ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಲಭ್ಯವಿರುವ ವಸ್ತುಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುವ ಜೊತೆಗೆ ಜಿಲ್ಲೆಯಾದ್ಯಂತ ಈ ಕುರಿತು ವಸ್ತು ಪ್ರದರ್ಶನಗಳನ್ನು ಆಯೋಜಿಸುವಂತೆ ಸೂಚಿಸಿದರು.
ಇದನ್ನು ಓದಿ : workshop/ ಕಾರ್ಯಕ್ರಮ ಸಂಘಟನಾ ಕಾರ್ಯಗಾರ
ಜಿಲ್ಲೆಯಲ್ಲಿ ವೈದ್ಯಕೀಯ ತ್ಯಾಜ್ಯಗಳ ಸಂಗ್ರಹ ಮತ್ತು ವಿಲೇವಾರಿಯನ್ನು ಇನ್ನೂ ಹೆಚ್ಚು ಸಮಪರ್ಕಕವಾಗಿ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಡ್ಡಾಯವಾಗಿ ೩ ತಿಂಗಳಿಗೊಮ್ಮೆ ನಡೆಸುವ ಮೂಲಕ ಜಿಲ್ಲೆಯನ್ನು ಸಂಪೂರ್ಣ ತ್ಯಾಜ್ಯ ಮುಕ್ತ ಸ್ವಚ್ಛ ಜಿಲ್ಲೆಯನ್ನಾಗಿ ಮಾಡಲು ಶ್ರಮವಹಿಸಬೇಕು ಎಂದರು.
ಇದನ್ನು ಓದಿ : Arrested/ ಗರ್ಭಿಣಿ ಹಸು ಕೊಂದ ಭಟ್ಕಳದ ಇಬ್ಬರ ಬಂಧನ
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ದಿವ್ಯಶ್ರೀ ಸಿ.ಎಂ., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಆಡಳಿತ) ನಾಗೇಶ ರಾಯ್ಕರ, ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ.ಸಂತೋಷ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಜರಿದ್ದರು.
ಇದನ್ನು ಓದಿ : Women’s Day/ ಸೋನಾರಕೇರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ