ಉಡುಪಿ (Udupi) : ಇಲ್ಲಿಯ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ಅವಘಡ (Fire accident) ಸಂಭವಿಸಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಟ್ಟಡ ನವೀಕರಣ ಕೆಲಸ ನಡೆದಿತ್ತು. ಹೀಗಾಗಿ ರೋಗಿಗಳು ಇರಲಿಲ್ಲ. ಸೋಮವಾರ ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವವರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭ ಮಾಡುವಾಗ ಹಾಲ್ ನಲ್ಲಿ ಬೆಂಕಿ ಹೊತ್ತಿಕೊಂಡು ಶಬ್ದ ಕೇಳಿ ಬಂದಿದೆ (Fire accident). ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಅಂತಾರಾಷ್ಟ್ರೀಯ ಕಡಲ ಸ್ವಚ್ಛತಾ ದಿನಾಚರಣೆ

ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಕುಸುಮ ಎಂಬುವವರು ಬಂದಿದ್ದರು. ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಟಕ್ ಟಕ್ ಶಬ್ದ ಕೇಳಿ ಬಂದಿತ್ತು. ಹೊರಗೆ ಬಂದು ನೋಡುವಾಗ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಡಾ. ಸತೀಜ್ ಅವರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಸುದ್ದಿ ತಿಳಿದು ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಅಗ್ನಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಮೊದಲ ಮಹಡಿಯಲ್ಲಿ ಉಳಿದುಕೊಂಡಿದ್ದ ಇಬ್ಬರು ಕೆಲಸದವರು ಹೊರಗೆ ಬಂದಿದ್ದಾರೆ.

ಇದನ್ನೂಓದಿ :  ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ