ಬೆಳಗಾವಿ: ನಾವಗೆ ಗ್ರಾಮದ ಸನಿಹದ ಟಿಕ್ಸ್‌ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಹೊತ್ತಿಕೊಂಡು (Fire disaster) ಮೂವರು ಗಂಭೀರಗೊಂಡ ಘಟನೆ ನಿನ್ನೆ ಮಂಗಳವಾರ ರಾತ್ರಿ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಬೆಳಗಾವಿ ತಾಲೂಕಿನ ಕವಳವಾಡಿಯ ಮಾರುತಿ ನಾರಾಯಣ ಕರವೇಕರ (32), ಹಳೇ ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಲಗುಡೆ (35) ಮತ್ತು ರಾಝವಾಡಿಯ ರಂಜಿತ ದಶರಥ ಪಾಟೀಲ (39) ಎಂಬ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡವರು. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮೂವರ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣ ಹೆಚ್ಚಿನ ಚಿಕಿತ್ಸೆಗೆ ಕೆಎಲ್‌ಇ ಆಸ್ಪತ್ರೆಗೆ ಸಾಗಿಸಲಾಗಿದೆ. ಮಾರ್ಕಂಡೇಯ ನಗರದ ಯಲ್ಲಪ್ಪ (20) ಎಂಬ ಕಾರ್ಮಿಕ ಇನ್ನೂ ಕಾರ್ಖಾನೆ ಒಳಗೆ ಸಿಲುಕಿದ್ದಾರೆ ಎಂದು ಕಾರ್ಮಿಕರು ಮಾಹಿತಿ ನೀಡಿದ್ದಾರೆ. ಯುವಕನ ಸಂಬಂಧಿಕರು ಕಾರ್ಖಾನೆ ಆವರಣದಲ್ಲಿ ಜಮಾಯಿಸಿದ್ದು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ :  ಜಾಲಿ ಪ.ಪಂ.ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಸ್ನೇಹಂ ಹೆಸರಿನ ಈ ಕಾರ್ಖಾನೆಯಲ್ಲಿ ಮೂರು ಶಿಫ್ಟ್‌ಗಳಲ್ಲಿ ತಲಾ 74 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಅವಘಡ (fire disaster) ಮಂಗಳವಾರ ರಾತ್ರಿ ಸುಮಾರು 8.30 ರ ಸುಮಾರಿಗೆ ಸಂಭವಿಸಿದೆ. ಕಾರ್ಖಾನೆ ಒಳಗೆ ಎಷ್ಟು ಜನರಿದ್ದಾರೆ ಹಾಗೂ ಎಷ್ಟು ಜನ ಹೊರಗೆ ಓಡಿ ಬಂದಿದ್ದಾರೆ ಎನ್ನುವುದು ತಿಳಿದಿಲ್ಲ. ಬೆಂಕಿ ಅವಘಡದ ಮಾಹಿತಿ ಕಾಳಿಚ್ಚಿನಂತೆ ಹರಡಿ, ಸುತ್ತಮುತ್ತಲಿನ ಅಪಾರ ಪ್ರಮಾಣದ ಜನ ಕಾರ್ಖಾನೆ ಇರುವ ಸ್ಥಳಕ್ಕೆ ಧಾವಿಸಿದರು. ತಮ್ಮ ಕುಟುಂಬದ ಸದಸ್ಯರನ್ನು ರಕ್ಷಿಸುವಂತೆ ಜನ ಮೊರೆ ಇಡುತ್ತಿರುವ ದೃಶ್ಯ ಕಂಡು ಬಂದಿದೆ.

ಇದನ್ನೂ ಓದಿ :  ಮೀಸಲಾತಿ ಬಂದರೂ ಭಟ್ಕಳ ಪುರಸಭೆ ಅತಂತ್ರ

ಕೆಲವರು ಹೇಳುವ ಪ್ರಕಾರ ಹತ್ತಕ್ಕೂ ಹೆಚ್ಚು ಜನ ಕಾರ್ಖಾನೆ ಒಳಗೆ ಬೆಂಕಿಗೆ ಆಹುತಿಯಾದ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಳೆ ಬಿಡುವು ಪಡೆದುಕೊಂಡಿತ್ತು. ಇದರಿಂದ ಬೆಂಕಿ ಮತ್ತಷ್ಟು ಪ್ರಖರ ರೂಪ ಪಡೆದುಕೊಂಡು ಅದರ ಜ್ವಾಲೆ ಎಲ್ಲಾ ಕಡೆ ಅತಿ ವೇಗದಿಂದ ಹರಡಿತ್ತು. ಸದ್ಯಕ್ಕೆ ಏನೂ ಹೇಳಲು ಆಗುವುದಿಲ್ಲ ಎಂದು ಪೊಲೀಸರು ಸಹ ತಿಳಿಸಿದ್ದಾರೆ.

ವಿಡಿಯೋ ಸಹಿತ ಇದನ್ನೂ ಓದಿ : ನಿವೃತ್ತ ಯೋಧಗೆ ತವರಿನಲ್ಲಿ ಅದ್ದೂರಿ ಸ್ವಾಗತ