ಭಟ್ಕಳ: ಇಲ್ಲಿನ ತರಬಿಯತ್ ಎಜುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಶಾಲೆಯಲ್ಲಿ ಟೆಂಪೋ ಚಾಲಕರು ಮತ್ತು ಸಹಾಯಕರಿಗಾಗಿ ಪ್ರಥಮ ಚಿಕಿತ್ಸೆ (first aid) ಮತ್ತು ಸುರಕ್ಷತಾ ನಿಯಮ ಕುರಿತು ಬುಧವಾರ ಕಾರ್ಯಾಗಾರ ನಡೆಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಬರ್ಮಪ್ಪ ಬೆಳಗಲಿ, ರಸ್ತೆ ನಿಯಮಗಳು ಮತ್ತು ಮಕ್ಕಳ ಸುರಕ್ಷತಾ ಕ್ರಮಗಳ ಬಗ್ಗೆ ಶಾಲಾ ಟೆಂಪೋ ಚಾಲಕರು ಮತ್ತು ಸಹಾಯಕರಿಗೆ ಮಾಹಿತಿ ನೀಡಿದರು. ವೆಲ್ಫೇರ್ ಆಸ್ಪತ್ರೆಯ ಡಾ.ಶಾಕಿಯಾ ಹಾಗೂ ಆಸ್ಪತ್ರೆಯ ಸಿಸ್ಟರ್ ಪ್ರಥಮ ಚಿಕಿತ್ಸೆ (first aid) ಮತ್ತು ತರ್ತು ಸ್ಥಿತಿಯ ಸಂದರ್ಭದಲ್ಲಿ ಏನೆಲ್ಲ ಕ್ರಮಗಳನ್ನು ಜರುಗಿಸಬೇಕು ಎಂಬುದರ ಕುರಿತಂತೆ ಪ್ರಾಯೋಗಿಕವಾಗಿ ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿದರು.

ಇದನ್ನೂ ಓದಿ : ಭಟ್ಕಳದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ಲಿಯಾಖತ್ ಅಲಿ, ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ಎಷ್ಟು ಮುಖ್ಯವೋ ಅವರ ಸುರಕ್ಷತೆಯ ಬಗ್ಗೆ ಜಾಗರೂಕತೆ ವಹಿಸುವುದು ಅಷ್ಟೇ ಮುಖ್ಯ ಎಂದರು.

ಇದನ್ನೂ ಓದಿ : ರಾಷ್ಟ್ರಧ್ವಜಾರೋಹಣ ಮಾಡದ ರಾಷ್ಟ್ರೀಕೃತ ಬ್ಯಾಂಕ್‌

ಹಿರಿಯ ಶಿಕ್ಷಕ ಎಂ.ಆರ್.ಮಾನ್ವಿ ಪ್ರಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಸಂಸ್ಥೆಯ ಉಪಾಧ್ಯಾಕ್ಷ ಸೈಯ್ಯದ್ ಖುತುಬ್ ಬರ್ಮಾವರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ. ಬರ್ಮಪ್ಪ ಬೆಳಗಲಿಯವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.