ಭಟ್ಕಳ: ತಾಲೂಕಿನ ಜಾಲಿಕೋಡಿ ಸಮೀಪ ಅರಬ್ಬಿ ಸಮುದ್ರದಲ್ಲಿ (arabian sea) ಪಾತಿ ದೋಣಿ ಪಲ್ಟಿಯಾದ ಪರಿಣಾಮ ಮೀನುಗಾರನೊಬ್ಬ ಸಮುದ್ರದಲ್ಲಿ ನಾಪತ್ತೆಯಾಗಿರುವ (Fisherman missing) ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ನಾಪತ್ತೆಯಾದ ಮೀನುಗಾರನನ್ನು ಜಾಲಿ ನಿವಾಸಿ ಮಂಜುನಾಥ ಬೇಟಿ ಮೊಗೇರ (೫೬) ಎಂದು ಗುರುತಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮಾಹಿತಿಯ ಪ್ರಕಾರ, ಮಂಜುನಾಥ ಅವರು ಮಧ್ಯಾಹ್ನ ತಮ್ಮ ಪಾತಿ ದೋಣಿಯಲ್ಲಿ ಒಬ್ಬರೇ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದ ಅಲೆಗಳ ತೀವ್ರ ಅಬ್ಬರಕ್ಕೆ ದೋಣಿ ಆಕಸ್ಮಿಕವಾಗಿ ಪಲ್ಟಿಯಾಗಿದ್ದು, ಅವರು ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ (Fisherman missing) ಎಂದು ತಿಳಿದುಬಂದಿದೆ.
Rotary/ ರೋಟರಿ ಅಧ್ಯಕ್ಷರಾಗಿ ಶ್ರೀನಾಥ ಪೈ ಪದಗ್ರಹಣ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಮೀನುಗಾರರು ತಮ್ಮ ದೋಣಿಗಳೊಂದಿಗೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಬಳಿಕ ಕರಾವಳಿ ಪೊಲೀಸ್ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.
Mari jatre/ ಅಮಟೆ ಮರಕ್ಕೆ ಕಂಪು; ಮಾರಿ ಮೂರ್ತಿ ತಯಾರಿಕೆಗೆ ಚಾಲನೆ
ಕಡಲು ಪ್ರಕ್ಷುಬ್ಧವಾಗಿರುವುದರಿಂದ ಮತ್ತು ಅಲೆಗಳ ರಭಸ ಹೆಚ್ಚಿರುವ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದು, ನಾಪತ್ತೆಯಾದ ಮೀನುಗಾರನ ಪತ್ತೆಗಾಗಿ ಸುತ್ತಮುತ್ತಲಿನ ಸಮುದ್ರ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
Chaturmasya/ ಬೈಂದೂರಿನಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಚಾತುರ್ಮಾಸ್ಯ

