ಭಟ್ಕಳ: ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ, ಆ ಹಣ ಮರಳಿ ಸಿಗದ ಕಾರಣ ಮನನೊಂದುಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ (Followup).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಬೆಳಕೆ ಗ್ರಾಮದ ಗಾಯತ್ರಿ, ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಗಾಯತ್ರಿಗೆ ೧೦ ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ ೧೦ ಸಾವಿರ ರೂಪಾಯಿ ಸಾಲ ಪಡೆದಿದ್ದ.
College Student/ ಭಟ್ಕಳದ ಕಾಲೇಜು ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ
ಆದರೆ ನಿಗದಿತ ಸಮಯ ಕಳೆದರೂ ಹಣವನ್ನು ಮರಳಿ ನೀಡದ್ದರಿಂದ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್‌ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ (Followup).
municipal officials/ ಸ್ಪಂದಿಸದ ನಗರಸಭೆ ಅಧಿಕಾರಿಗಳು: ಹೆದ್ದಾರಿ ತಡೆ ಪ್ರತಿಭಟನೆಯ ಎಚ್ಚರಿಕೆ



