ಭಟ್ಕಳ: ತಾಲೂಕಿನ ಜಾಲಿಯ ದೇವಿನಗರದಲ್ಲಿರುವ ಹಲವು ವರ್ಷಗಳ ಇತಿಹಾಸ ಹೊಂದಿರುವ ಹಿಂದೂ ರುದ್ರಭೂಮಿ (cemetery) ಜಾಗ ಇದೀಗ ಅತಿಕ್ರಮಣದ (encroachment) ಸಮಸ್ಯೆಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅರಣ್ಯ ಇಲಾಖೆಯ (forest department) ವ್ಯಾಪ್ತಿಗೆ ಒಳಪಟ್ಟಿರುವ ಈ ಜಾಗದಲ್ಲಿ ಅಕ್ರಮವಾಗಿ ಅತಿಕ್ರಮಿಸಿ (encroachment) ಮನೆ ನಿರ್ಮಾಣ ನಡೆಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

book released/ ಸುಧಾ ಭಂಡಾರಿ ಅವರ ೧೧ ನೇ ಕೃತಿ ಬಿಡುಗಡೆ, ರಾಗ ಲಹರಿ ಕಾರ್ಯಕ್ರಮ

ಗ್ರಾಮಸ್ಥರು ದೂರಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅತಿಕ್ರಮಣದಾರರಿಗೆ ಎಚ್ಚರಿಕೆ ನೀಡಿದರೂ, ಕಟ್ಟಡ ನಿರ್ಮಾಣವನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪರಿಣಾಮವಾಗಿ, ಅತಿಕ್ರಮಣದಾರರು ಹಂತಹಂತವಾಗಿ ಮನೆ ನಿರ್ಮಾಣವನ್ನು ಪೂರ್ಣಗೊಳಿಸಿರುವುದಾಗಿ ತಿಳಿದುಬಂದಿದೆ. ಇದರಿಂದ ಸ್ಥಳೀಯರಲ್ಲಿ ಅಸಮಾಧಾನ ಹೆಚ್ಚಾಗಿದೆ.

Karate students/ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿಗಳಿಗೆ ಸನ್ಮಾನ

ರುದ್ರಭೂಮಿ ಸಮೀಪದಲ್ಲಿರುವ ನಾಗಯಕ್ಷ ಚೌಡಿ ದೇವಸ್ಥಾನ ಹಾಗೂ ಅಯ್ಯಪ್ಪ ಭಜನಾ ಮಂದಿರದ ಅಭಿವೃದ್ಧಿಗೆ ಮಾತ್ರ ಅರಣ್ಯ ಇಲಾಖೆ ತಡೆಯೊಡ್ಡುತ್ತಿರುವುದು “ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ” ಎಂಬ ಧೋರಣೆಯಂತೆ ಕಾಣುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

AITM/ ವಿಟಿಯು ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಎಐಟಿಎಂ ವಿದ್ಯಾರ್ಥಿ

ಅರಣ್ಯ ಇಲಾಖೆಯ ಈ ರೀತಿಯ ನಡೆಗೆ ವಿರೋಧ ವ್ಯಕ್ತಪಡಿಸಿರುವ ಜಾಲಿಯ ದೇವಿನಗರದ ನಿವಾಸಿಗಳು, ಅಕ್ರಮ ಅತಿಕ್ರಮಣದ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ರುದ್ರಭೂಮಿ ಜಾಗವನ್ನು ರಕ್ಷಿಸಬೇಕು ಎಂದು ಸ್ಥಳೀಯ ಮುಖಂಡ ದಯಾ ನಾಯ್ಕ ಆಗ್ರಹಿಸಿದ್ದಾರೆ.

SSLC result/ ಶಿರಾಲಿಯ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆ ಶೇ ೧೦೦ ಸಾಧನೆ