ಭಟ್ಕಳ: ಜಿಲ್ಲೆಯ ಜೀವನಾಡಿಗಳಾಗಿರುವ ಅಘನಾಶಿನಿ ನದಿ ಹಾಗೂ ಬೇಡ್ತಿ ನದಿಗಳ ಮೇಲೆ ಪರಿಣಾಮ ಬೀರುವ, ಶರಾವತಿ ಪಂಪ್ಡ್ ಸ್ಟೋರೇಜ್ (Sharavathi pumped storage) ಯೋಜನೆಯಂತಹ ಜನವಿರೋಧಿ ಯೋಜನೆಗಳನ್ನು ಜಿಲ್ಲೆಯ ಜನರು ಮೌನವಾಗಿ ಸಹಿಸುವ ಪ್ರಶ್ನೆಯೇ ಇಲ್ಲ. ಇಂತಹ ಯೋಜನೆಗಳು (Sharavathi pumped storage) ಬಂದಾಗ ಅವುಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಮಾಜಿ ಸಚಿವ ಶಿವಾನಂದ ನಾಯ್ಕ ಎಚ್ಚರಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪಟ್ಟಣದ ಭಾರತೀಯ ಜನತಾ ಪಕ್ಷ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪರ ಕೆಲಸಗಳಿಗೆ ಸದಾ ಸ್ವಾಗತವಿದೆ. ಆದರೆ ಜನರ ಬದುಕಿಗೆ ಕುತ್ತು ತರುವ, ಪರಿಸರ ಹಾಗೂ ಸಂಸ್ಕೃತಿಗೆ ಧಕ್ಕೆ ತರುವ ಯೋಜನೆಗಳಿಗೆ ವಿರೋಧಿಸುವುದು ನಮ್ಮ ಕರ್ತವ್ಯ. ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದರೆ, ರಾಜ್ಯ ಸರ್ಕಾರ ಭ್ರಷ್ಟಾಚಾರದ ಕಂದಕದಲ್ಲಿ ಮುಳುಗಿ ಜನರ ವಿಶ್ವಾಸ ಕಳೆದುಕೊಂಡಿದೆ. ಜಿಲ್ಲೆಯ ಉಸ್ತುವಾರಿ ಸಚಿವರು ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದು ತೀವ್ರ ಟೀಕೆ ನಡೆಸಿದರು.

ಇದನ್ನು ಓದಿ: Ranginkatte/ ರಂಗಿನಕಟ್ಟೆ ಅಶ್ವತ್ಥ ಮರ ತೆರವು ಯಾವಾಗ ಗೊತ್ತಾ?