ಭಟ್ಕಳ: ಸಾಹಿತ್ಯ ಅಕ್ಷರಗಳ ಜೋಡಣೆಯಲ್ಲ. ಸಮಾಜ ಸುಧಾರಣೆಗೆ ದಾರಿ ತೋರಿಸುವ ಬೆಳಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗೇಶ ಶೆಟ್ಟಿ ನುಡಿದರು. ಅವರು ಭಟ್ಕಳ (Bhatkal) ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ (Foundation Day) ಉದ್ಘಾಟಿಸಿ ಮಾತನಾಡಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆ. ಕನ್ನಡ ಸಾಹಿತ್ಯವನ್ನು, ಲೇಖಕರನ್ನು ಉತ್ತೇಜಿಸುವುದು, ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸುವ ಮೂಲಕ ನಮ್ಮ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಪರಿಷತ್ತು ಮಾಡುತ್ತಿದೆ. ಎಲ್ಲ ವಿದ್ಯಾರ್ಥಿಗಳು ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಳ್ಳಬೇಕೆಂದು ಕರೆ ನೀಡಿದರಲ್ಲದೇ ನಮ್ಮ ನಾಡು ನುಡಿಗೆ ನಮ್ಮ ನೆಲೆಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದು ನುಡಿದರು.

Tragedy/ ಮುಂಡಳ್ಳಿ ನೆಸ್ತಾರ ಬೀಚ್‌ನಲ್ಲಿ ಅವಘಡ:  ಸಮುದ್ರದಲ್ಲಿ ಮುಳುಗಿದ ಯುವಕರು 

ಕಸಾಪ ಗೌರವ ಕೋಶಾಧ್ಯಕ್ಷ, ಸಾಹಿತಿ ಶ್ರೀಧರ ಶೇಟ ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಹಿನ್ನೆಲೆ, ಸಾಧನೆಯ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕಸಾಪ ಆಜೀವ ಸದಸ್ಯ, ವಿಜಯ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕ ಎಂ ಆರ್ ನಾಯ್ಕ ಸಾಂದರ್ಭಿಕವಾಗಿ ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿಯ ಉದ್ಯೋಗವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು.

Janaspandan/ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ: ಸೀಮೆ ಎಣ್ಣೆ ದರ ಇಳಿಕೆಗೆ ಕ್ರಮಕ್ಕೆ ಮೀನುಗಾರರ ಮನವಿ

ಸಾಹಿತಿ ಮಾನಾಸುತ ಶಂಭು ಹೆಗಡೆ, ಸಾಹಿತ್ಯ ಪರಿಷತ್ತು ನಮ್ಮೆಲ್ಲರ ಅಭಿಮಾನದ ಸಂಸ್ಥೆಯಾಗಿದ್ದು ಸಂಸ್ಥಾಪನ ದಿನಾಚರಣೆಯ (Foundation Day) ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಾಹಿತ್ಯ ಪರಿಷತ್ತಿನ ಇತಿಹಾಸವನ್ನು ಸ್ಮರಿಸಿಕೊಳ್ಳಬೇಕು ಎಂದು ನುಡಿದು ಸ್ವರಚಿತ ಕವನ ವಾಚಿಸಿದರು.

encroachment/ ರುದ್ರಭೂಮಿ ಅತಿಕ್ರಮಣಕ್ಕೆ ಅರಣ್ಯ ಇಲಾಖೆ ಮೌನ: ಜಾಲಿಯ ದೇವಿನಗರದಲ್ಲಿ ಗ್ರಾಮಸ್ಥರ ಆಕ್ರೋಶ

ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗೇಶ ಶೆಟ್ಟಿ ಅವರನ್ನು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

book released/ ಸುಧಾ ಭಂಡಾರಿ ಅವರ ೧೧ ನೇ ಕೃತಿ ಬಿಡುಗಡೆ, ರಾಗ ಲಹರಿ ಕಾರ್ಯಕ್ರಮ

ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿ, ಸ್ವಾಗತಿಸಿ, ವಂದಿಸಿದರು. ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Karate students/ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿಗಳಿಗೆ ಸನ್ಮಾನ