ಭಟ್ಕಳ: ನಗರದ ಬೋಯಿರಕೇರಿಯ ಪುರಾತನ ಶ್ರೀ ಪಶುಪತಿ ದೇವಸ್ಥಾನದ (Pashupati Temple) ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ (foundation stone) ಫೆ ೮ ರವಿವಾರ ಬೆಳಿಗ್ಗೆ ೧೦-೩೦ಕ್ಕೆ ನಡೆಯಲಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಗೋಕರ್ಣದ ವೇದಮೂರ್ತಿ ಶ್ರೀನಿವಾಸ ಅಡಿಗಳ ನೇತೃತ್ವದಲ್ಲಿ ವೇದಮೂರ್ತಿ ರಾಘವೇಂದ್ರ ಭಟ್ ಇವರ ಅರ್ಚಕತ್ವದ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ಕಾರ್ಯಕ್ರಮ (foundation stone) ಫೆ ೮ ರವಿವಾರ ಬೆಳಿಗ್ಗೆ ೧೦-೩೦ಕ್ಕೆ ನಡೆಯಲಿದೆ. ರಾಜ್ಯ ಮೀನುಗಾರಿಕಾ ಹಾಗೂ ಬಂದರು ಸಚಿವ ಮಂಕಾಳ ವೈದ್ಯ ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ನಾಮಧಾರಿ ಗುರುಮಠದ ಅಧ್ಯಕ್ಷ ಅರುಣ ನಾಯ್ಕ, ಉದ್ಯಮಿ ಪದ್ಮನಾಭ ಪೈ, ಪಶುಪತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋವಿಂದ ನಾಯ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಚ್ಮಯ್ಯ ನಾಯ್ಕ, ಚಂದ್ರಹಾಸ ಭಟ್ ಉಪಸ್ಥಿತರಿರುವರು.
ಇದನ್ನು ಓದಿ: arrested/ ಕೋಳಿ ಅಂಕ ಆಡುತ್ತಿದ್ದ ಇಬ್ಬರ ಬಂಧನ



