ಭಟ್ಕಳ (Bhatkal): ಇಲ್ಲಿನ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆ ವತಿಯಿಂದ ಅತೀ ವಿಜೃಂಭಣೆಯಾಗಿ ೫ ದಿನಗಳ ಗಣೇಶೋತ್ಸವವನ್ನು ನಗರ ಠಾಣೆ ಆವರಣದಲ್ಲಿ
ಆಯೋಜಿಸಲಾಗಿದೆ (police Ganesha).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪ್ರತಿ ವರ್ಷದಂತೆ ಈ ವರ್ಷವೂ ೫ ದಿನಗಳ ಕಾಲ ನಗರ ಠಾಣೆಯ ಆವರಣದಲ್ಲಿ ನಗರ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಜೊತೆಗೂಡಿ ಗಣೇಶ ಹಬ್ಬವನ್ನು ಆಚರಿಸುತ್ತಿದ್ದಾರೆ. ಮೂರನೇ ದಿನವಾದ ಸೋಮವಾರ ಒಂದು ಸಾವಿರಕ್ಕೂ ಅಧಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಮಧ್ಯಾಹ್ನ ಮಹಾಪೂಜೆ ನೆರವೇರಿದ ನಂತರ ಬಂದಂತಹ ಭಕ್ತ ಸಮೂಹಕ್ಕೆ ಅನ್ನದಾನ ಸೇವೆ ಮಾಡಿದರು. ಹೊರಗಿನಿಂದ ಯಾವುದೇ ದೇಣಿಗೆ ಸಂಗ್ರಹಿಸದೆ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಅನ್ನ ಸಂತರ್ಪಣೆ ಖರ್ಚು-ವೆಚ್ಚಗಳನ್ನು ವ್ಯಯಿಸಿ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಅನ್ನದಾನ ಸೇವೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಜ್ಯೋತಿಷ್ಯ ಅರ್ಥ ಮಾಡಿಕೊಳ್ಳದಿರುವುದು ನಮ್ಮ ದೌರ್ಭಾಗ್ಯ
ಈ ರೀತಿ ಆಚರಣೆ (police Ganesha) ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಳದಲ್ಲಿ ಮಾತ್ರ ಕಾಣಸಿಗುತ್ತದೆ. ದಿನ ನಿತ್ಯ ಪ್ರಕರಣಗಳ ತನಿಖೆಯಲ್ಲಿ ತೊಡಗಿಕೊಂಡಿರುವ ಪೊಲೀಸರಿಗೆ ಈ ರೀತಿ ಎಲ್ಲರೂ ಒಟ್ಟಿಗೆ ಸೇರಿ ಹಬ್ಬ ಆಚರಿಸುವುದು ಸಂತೋಷ ತರುತ್ತದೆ. ಪ್ರತಿ ವರ್ಷ ಭಟ್ಕಳ ಪೊಲೀಸ್ ಇಲಾಖೆಯಿಂದ ನಡೆಯುವ ಈ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿಗೆ ಸಂಬಂಧಿಸಿದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : ರೊಬೋಟಿಕ್ಸ್ ಲ್ಯಾಬ್‌ಗಳ ಉದ್ಘಾಟನೆ