ಭಟ್ಕಳ (Bhatkal): ತಾಲೂಕಿನ ಮುಟ್ಟಳ್ಳಿ ಶಾಲೆಯ ೭೦ನೇ ವರ್ಷದ ವಾರ್ಷಿಕ ಸ್ನೇಹ ಸಾಂಸ್ಕೃತಿಕ ಸಮ್ಮಿಲನ (Gathering) ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮೊದಲ ವಿದ್ಯಾರ್ಥಿಯಾದ ಜಟ್ಟಪ್ಪ ನಾಯ್ಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಆಗಮಿಸಿದ್ದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಬೈಂದೂರು (Byndoor) ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಮಾತನಾಡಿ, ನಾವು ಕಲಿಯುವ ಸಮಯದಲ್ಲಿ ಇದ್ದ ತೊಂದರೆ ಈಗಿನ ವಿದ್ಯಾರ್ಥಿಗಳಿಗೆ ಬರಬಾರದು. ಅವರು ಸಹ ಒಂದು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕಾದರೆ ನಾವು ಹಳೆ ವಿದ್ಯಾರ್ಥಿಗಳು ಸೇರಿ ಖಂಡಿತವಾಗಿ ಶ್ರಮಿಸಬೇಕು. ನಾನು ಈ ಊರನ್ನು ಬಿಟ್ಟು ಸುಮಾರು ೩೦ ವರ್ಷಗಳೇ ಕಳೆದಿವೆ. ಆದರೆ ಈ ಕಾರ್ಯಕ್ರಮದಿಂದ ಬಾಲ್ಯದ ಸ್ನೇಹಿತರು ಹಾಗೂ ಸಹಪಾಠಿಗಳನ್ನು ಒಂದಾಗಿಸಿದೆ ಎಂದರು.
ಇದನ್ನೂ ಓದಿ : Shejjeshwar/ ಶ್ರೀ ಶೆಜ್ಜೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ
ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ ಮಾತನಾಡಿ, ಈ ವಾರ್ಷಿಕ ಸ್ನೇಹ ಸಮ್ಮೇಳನ (Gathering) ಹಬ್ಬದಂತೆ ಸೃಷ್ಟಿಯಾಗಿದೆ. ವಾರ್ಷಿಕೋತ್ಸವ ಎಂದರೆ ಹೀಗೆಯೇ ಇರಬೇಕು ಎನ್ನುವುದನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಗಂಗಾ ಮೊಗೇರ ಹಾಗೂ ಅಧ್ಯಾಪಕ ವೃಂದದವರು ಮಾದರಿಯಾಗಿ ತೋರಿಸಿಕೊಟ್ಟಿದ್ದಾರೆ. ಇಂಥ ಅದ್ದೂರಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಈ ಶಾಲೆಯ ಶಿಕ್ಷಕರ ಕಾರ್ಯಕ್ಕೆ ನಿಜಕು ಹೇಮ್ಮಯ ವಿಷಯವಾಗಿದೆ ಎಂದರು.
ಇದನ್ನೂ ಓದಿ : Gokarna Jathra/ ಶಿವರಾತ್ರಿಗೆ ಗೋಕರ್ಣ ಹೋಗಬೇಕಾ? ಇಲ್ಲಿದೆ ಸಾರಿಗೆ ವ್ಯವಸ್ಥೆ
ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸವಲತ್ತುಗಳು ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಪೋಷಕರನ್ನು ಖಾಸಗಿ ಶಾಲೆಗಳ ವ್ಯಾಮೋಹ ವ್ಯಾಪಿಸಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿರುವುದು ಆತಂಕಕಾರಿ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ, ಮಕ್ಕಳ ಪೋಷಕರಲ್ಲಿ ಮಾತ್ರ ಖಾಸಗಿ ಶಾಲೆಗಳ ಕುರಿತಾದ ವ್ಯಾಮೋಹ ಕಡಿಮೆಯಾಗಿಲ್ಲ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಹೇಳಿದರು.
ಇದನ್ನೂ ಓದಿ : Special Buses/ ಶಿವರಾತ್ರಿ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆ
ಸಭಾ ಕಾರ್ಯಕ್ರಮ ಪೂರ್ವದಲ್ಲಿ ಮೂಡಭಟ್ಕಳ ಬೈಪಾಸ್ ನಿಂದ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು, ಮೆರವಣಿಗೆಯಲ್ಲಿ ಆಕರ್ಷಿಸುವಂತೆ ಗೊಂಡರ ಡಕ್ಕೆ ಕುಣಿತ (gondara kunita), ಹುಲಿ ವೇಷ, ಚಂಡೆ ವಾದನ ಗಮನ ಸೆಳೆದವು. ಸಭಾ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಳೆಯ ವಿದ್ಯಾರ್ಥಿಗಳಿಗೆ, ದಾನಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಇದನ್ನೂ ಓದಿ : Survey/ ಹೊನ್ನಾವರದಲ್ಲೂ ಸರ್ವೆ, ನಿಷೇಧಾಜ್ಞೆ; ಎಲ್ಲಿ ಗೊತ್ತಾ?
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಟ್ಟಳ್ಳಿ ಗ್ರಾಮ ಪಂಚಾಯತ ರಜನಿ ನಾಯ್ಕ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆ ಹಳೆಯ ವಿದ್ಯಾರ್ಥಿ ಹಾಗೂ ಕುಮಟಾ (Kumta) ಡಯಟ್‌ನ ಹಿರಿಯ ಉಪನ್ಯಾಸಕ ಎಸ್.ಪಿ.ಭಟ್ಟ, ಬಿ.ಆರ್.ಸಿ. ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಉಲ್ಲಾಸ ಎಸ್. ನಾಯ್ಕ, ಸಿ.ಆರ್.ಪಿ. ಜಯಶ್ರೀ ಆಚಾರಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಅನಂತ ನಾಯ್ಕ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ರವಿ ನಾಯ್ಕ,ನಿವೃತ್ತ ಶಿಕ್ಷಕ ಎಂ.ಕೆ.ನಾಯ್ಕ ಉಪಸ್ಥಿತರಿದ್ದರು.
ಇದನ್ನೂ ಓದಿ : Women protest/ ಸಮುದ್ರಕ್ಕೆ ಹಾರಿದ ಮಹಿಳೆಯರು, ಮೂವರು ಅಸ್ವಸ್ಥ
ಶಾಲೆಯ ಮುಖ್ಯೋಪಾಧ್ಯಾಯಿನಿ ಗಂಗಾ ಮೊಗೇರ ಸ್ವಾಗತಿಸಿದರು. ಶಿಕ್ಷಕಿ ಲತಾ ನಾಯ್ಕ ವರದಿ ವಾಚನ ಮಾಡಿದರು. ಶಿಕ್ಷಕ ಗಜಾನನ ನಾಯ್ಕ ವಂದನಾರ್ಪಣೆಗೈದರು. ಶಿಕ್ಷಕರಾದ ಸುರೇಶ ಮುರುಡೇಶ್ವರ (Murudeshwar), ನಾರಾಯಣ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಸಂಜೆ, ಶಾಲಾ ಪುಟಾಣಿಗಳಿಂದ ನೃತ್ಯ ಸಿಂಚನ, ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ವೈಭವ, ನವ್ಯ ಶೈಲಿಯ ನೃತ್ಯಗಳು, ವಿದ್ಯಾರ್ಥಿನಿಯರಿಂದ ನವಶಕ್ತಿ ವೈಭವ ಪ್ರದರ್ಶನಗೊಂಡವು.
ಇದನ್ನೂ ಓದಿ : DC Order/ ಈ ಗ್ರಾಮಗಳಲ್ಲಿ ನಿಷೇಧಾಜ್ಞೆ ಯಾಕೆ ಗೊತ್ತಾ?