ಕಾರವಾರ (Karwar): ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಮತ್ತು ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟ ಕೇಣಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ (DC Order). ಜಿಯೋಟೆಕ್ನಿಕಲ್ ಇನ್ವೆಸ್ಟಿಗೇಷನ್ (Geotechnical Investigation) ಕಾಮಗಾರಿ ಸಂಬಂಧ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಫೆ.೨೪ರಂದು ಬೆಳಿಗ್ಗೆ ೬ ಗಂಟೆಯಿಂದ ಫೆ.೨೫ರ ಸಂಜೆ ೬ ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ ೨೦೨೩ ಕಲಂ ೧೬೩ರನ್ವಯ ನಿಬಂಧನಗೊಳಪಟ್ಟು ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ಆದೇಶಿಸಿದ್ದಾರೆ. ಈ ಅವಧಿಯಲ್ಲಿ, ಗರಿಷ್ಟ/ಕನಿಷ್ಠ 5 ಹಾಗೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಧರಣಿ ಹಾಗೂ ಪ್ರತಿಭಟನೆ ಉದ್ದೇಶಕ್ಕೆ ಸೇರುವುದನ್ನು ಹಾಗೂ ಸಾರ್ವಜನಕರಿಗೆ ತೊಂದರೆಯಿಂಟಾಗುವಂತೆ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ : Bhajane/ ಸಪ್ತ ಪ್ರಹರ ಭಜನಾ ಕಾರ್ಯಕ್ರಮ
ಯಾವುದೇ ವ್ಯಕ್ತಿಗಳು/ಗುಂಪುಗಳು ಆಯುಧ, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಕುಡುಗೋಲುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ (DC Order).
ಇದನ್ನೂ ಓದಿ : Padayatra / ೧೫ನೇ ವರ್ಷದ ಪಾದಯಾತ್ರೆ ಆಯೋಜನೆ