ಭಟ್ಕಳ (Bhatkal) : ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ (AITM) ೨೦೨೨-೨೪ನೆಯ ಎಂಬಿಎ (MBA) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ಜ. ೨೧ರಂದು ನಡೆಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಾದ್ ದಾಮುದಿ, ಉದ್ಯಮಶೀಲತೆಯ ಅವರ ಸ್ಪೂರ್ತಿದಾಯಕ ಪ್ರಯಾಣವನ್ನು ಹಂಚಿಕೊಂಡರು. ಅಂಜುಮನ್ ಹಮಿ-ಎ- ಮುಸ್ಲಿಮೀನ್ ಅಧ್ಯಕ್ಷ ಯೂನಸ್ ಕಾಜಿಯಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಎಂದಿಗೂ ಮರೆಯಬಾರದು. ಯಾವಾಗಲೂ ಹೆಚ್ಚಿನ ಗುರಿ ಹೊಂದಬೇಕು. ಉನ್ನತ ಸ್ಥಾನ ತಲುಪುವ ಉತ್ಸಾಹ ಬೆಳೆಸಿಕೊಳ್ಳಬೇಕು ಎಂದರು.

ವಿಡಿಯೋ ಸಹಿತ ಇದನ್ನು ಓದಿ : Kendaseve/ ಸೋಡಿಗದ್ದೆ ಜಾತ್ರೆಯಲ್ಲಿ ಹರಕೆಯ ಕೆಂಡ ಸೇವೆ ಸಂಪನ್ನ

ಉಪಾಧ್ಯಕ್ಷ ಡಾ. ಜುಬೈರ್ ಕೋಲಾ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಶಾಕ್ ಶಾಬಂದ್ರಿ, ಪದವೀಧರರು ತಮ್ಮ ಜವಾಬ್ದಾರಿಗಳ ಬಗ್ಗೆ ಜಾಗರೂಕರಾಗಿರಲು ಸಲಹೆ ನೀಡಿದರು. AITM ಪ್ರಾಂಶುಪಾಲ ಡಾ. ಫಜಲುರ್ ರಹಮಾನ್ ಕೆ. ಮಾತನಾಡಿದರು.

ವಿಡಿಯೋ ಸಹಿತ ಇದನ್ನು ಓದಿ : Bhatkal/ ಹಸುವಿನ ಕೆಚ್ಚಲು ಕೊಯ್ದವರಿಗೆ ಕಠಿಣ ಶಿಕ್ಷೆಯಾಗಲಿ

ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಸ್ಮಾಯಿಲ್ ಜುಕಾಕು, ಕಾಲೇಜು ಕಾರ್ಯದರ್ಶಿ ಮೊಹಿದ್ದೀನ್ ರುಕ್ನುದ್ದೀನ್, ರಿಜಿಸ್ಟ್ರಾರ್ ಪ್ರೊ. ಜಾಹಿದ್ ಹಸನ್ ಖರೂರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಮ್ರಾ ಮತ್ತು ಸಮನ್ ನಿರ್ವಹಿಸಿದರು.

ವಿಡಿಯೋ ಸಹಿತ ಇದನ್ನು ಓದಿ: Sodigadde/ ಗೊಂಬೆ ಅರ್ಪಿಸಿ ಹರಕೆ ತೀರಿಸಿದ ಭಕ್ತರು