ಕಾರವಾರ (Karwar) : ಜಿಲ್ಲೆಯಲ್ಲಿನ ಎಲ್ಲಾ ಪಟಾಕಿ ಮಾರಾಟ ಮಾಡುವ ಮಳಿಗೆಗಳಿಗೆ ಕೇವಲ ಹಸಿರು ಪಟಾಕಿಗಳನ್ನು (Green crackers) ಮಾತ್ರ ಮಾರಾಟ ಮಾಡಲು ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತ ಸೂಚಿಸಿದೆ. ಸಾರ್ವಜನಿಕರು ಪಟಾಕಿ ಖರೀದಿಸುವ ಮುನ್ನ ಪಟಾಕಿಯ ಮೇಲಿರುವ ಹಸಿರು ಚಿಹ್ನೆಗಳನ್ನು ಪರೀಕ್ಷಿಸಿ ಖರೀದಿಸಬೇಕು ಹಾಗೂ ಪಟಾಕಿಯನ್ನು ಸಿಡಿಸುವ ಸಂದರ್ಭದಲ್ಲಿ ಚಿಕ್ಕ ಮಕ್ಕಳ ಜೊತೆ ಪೋಷಕರು ಇರಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಬೆಳಕಿನ ಹಬ್ಬ ದೀಪಾವಳಿಯನ್ನು (Deepavali) ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು. ಕೇವಲ ಹಸಿರು ಪಟಾಕಿ (Green crackers) ಮಾರಾಟಕ್ಕೆ, ಬಳಕೆಗೆ ಮಾತ್ರ ಅವಕಾಶವಿದೆ. ರಾಷ್ಟೀಯ ಹಸಿರು ಪ್ರಾಧಿಕಾರದ ಆದೇಶದಂತೆ, ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಾಲಯವು (Supreme court) ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ.

ಇದನ್ನೂ ಓದಿ : ತೇಜಸ್ವಿನಿ ವೆರ್ಣೇಕರ್ ಗೆ ರಾಷ್ಟ್ರಮಟ್ಟದ ಸಂಗೀತ ಪ್ರಶಸ್ತಿ

ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR (Council of Scientific & Industrial Research)  ಮತ್ತು NEERI (National Environmental Engineering Research Institute) ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಉಪಯೋಗಿಸಲು ಅವಕಾಶ ಇದೆ. ರಾತ್ರಿ ೮ ರಿಂದರಾತ್ರಿ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಡಿಯೋ ವರದಿ ಸಹಿತ ಇದನ್ನೂ ಓದಿ : ಪ್ರತಿ ವಾರ ಭಟ್ಕಳ, ಹೊನ್ನಾವರದಲ್ಲಿ ಸಚಿವರ ಜನಸ್ಪಂದನ