ಭಟ್ಕಳ: ರಮ್ಜಾನ್ (Ramadan) ಹಬ್ಬದ ಹಿನ್ನೆಲೆಯಲ್ಲಿ ನಗರದ ಬಂದರ್ ರೋಡ್‌ನಲ್ಲಿ ಹಾಕಲಾಗಿದ್ದ ಹಸಿರು ಬಾವುಟವನ್ನು (Green flag) ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಬಳಿಕ, ಕೆಲ ಕೀಡಿಗೇಡಿಗಳು ಮತ್ತೆ ಅದೇ ಸ್ಥಳದಲ್ಲಿ ಕಾನೂನು ಮೀರಿ ಹಸಿರು ಬಾವುಟ (Green flag) ಹಾರಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜಾಲಿಯ ದೇವಿನಗರದ ನಾಮಫಲಕ ವಿಚಾರದಲ್ಲಿ ಕಾರ್ಯಕರ್ತರ ಮೇಲೆ ಮೊಕದ್ದಮೆ ದಾಖಲಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ಇದೇ ರೀತಿಯ ಕ್ರಮವನ್ನು ಈ ಪ್ರಕರಣದಲ್ಲೂ ಅನುಸರಿಸಬೇಕು ಎಂದು ಒತ್ತಾಯಿಸಿದರು. ನಗರಸಭೆ ಆಯುಕ್ತರ ಅನುಪಸ್ಥಿತಿಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಲ್ಲಿ ಕ್ರಮಕ್ಕೆ ಆಗ್ರಹಿಸಿದರು.

Bhatkal Municipal Commissioner/ ಭಟ್ಕಳ‌ ನಗರಸಭೆ ಪೌರಾಯುಕ್ತರಾಗಿ ಬಾಬಾ ಸಾಹೇಬ್ ಮಾನೆ ಅಧಿಕಾರ ಸ್ವೀಕಾರ

ಈ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಜಯಂತ ನಾಯ್ಕ, ಸಹ ಸಂಚಾಲಕ ನಾಗೇಶ ಹೊನ್ನೆಗದ್ದೆ, ಕುಮಾರ ನಾಯ್ಕ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ (BJP) ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಮಂಡಲಾಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ಆರ್‌ಟಿಐ (RTI) ಕಾರ್ಯಕರ್ತ ನಾಗೇಂದ್ರ ನಾಯ್ಕ, ರಾಜೇಂದ್ರ ನಾಯ್ಕ ಉಪಸ್ಥಿತರಿದ್ದರು.

Women’s Day/ ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ