ಅಂಕೋಲಾ : ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಗುಡ್ಡ ಕುಸಿದು(land slide) ಏಳು ಜನರು ಸಾವನ್ನಪ್ಪಿದ ಸ್ಥಳಕ್ಕೆ ಇಂದು (ಜುಲೈ ೨೦) ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಬೆಳಗ್ಗೆ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಅವರು ರಸ್ತೆ ಮಾರ್ಗವಾಗಿ ಶಿರೂರು(Shirooru) ಗುಡ್ಡ ಕುಸಿತ ಸ್ಥಳ ತಲುಪಿದರು. ಜಿಲ್ಲಾಧಿಕಾರಿ ಸೇರಿ ಇನ್ನಿತರೆ ಅಧಿಕಾರಿಗಳು ಗುಡ್ಡ ಕುಸಿತ, ಪರಿಹಾರ ಕಾರ್ಯ, ನೊಂದವರಿಗೆ ನೆರವು, ಹೆದ್ದಾರಿಯಲ್ಲಿ ಮಣ್ಣು ತೆರವು, ಗಂಗಾವಳಿ ನದಿ ಪ್ರವಾಹ ಹಾಗೂ ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ : ಕಾರ್ಗೋ ಹಡಗಿನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಸರಕು
ಸುರಿಯುವ ಮಳೆಯಲ್ಲಿಯೇ ಗುಡ್ಡ ಕುಸಿತ ಸ್ಥಳ ವೀಕ್ಷಿಸಿದ ಸಚಿವರು, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಇದನ್ನೂ ಓದಿ : ಜುಲೈ ೨೦ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ
ಮೃತರ ಕುಟುಂಬಗಳ ಜತೆ ಸರ್ಕಾರ ನಿಲ್ಲಲಿ
ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ರಾಜ್ಯ ಸರ್ಕಾರ ನಿಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಾಯಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಚ್.ಡಿ.ಕುಮಾರಸ್ವಾಮಿ, ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು. ಕೇಂದ್ರ ಸರ್ಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ : ಕಸ ಎಸೆದು ಹೋಗುತ್ತಿದ್ದ ವ್ಯಕ್ತಿಯಿಂದಲೇ ಕಸ ಎತ್ತಿಸಿದರು !
ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಇದನ್ನೂ ಓದಿ : ನಾಳೆ ಅಂಕೋಲಾಕ್ಕೆ ಸಿಎಂ ಭೇಟಿ
ರಾಜ್ಯ ಸರ್ಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಲು ಎಚ್.ಡಿ.ಕುಮಾರಸ್ವಾಮಿ (HD Kumaraswamy) ನಿರಾಕರಿಸಿದರು. ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ. ಕೇಂದ್ರದಿಂದ ಏನು ಸಹಾಯ ಮಾಡಿಸಬಹುದೋ ಅದನ್ನು ಮಾಡಿಸುತ್ತೇನೆ. ಇಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳದ್ದು ಜವಾಬ್ದಾರಿ ಇದೆ ಎಂದು ಉತ್ತರಿಸಿದರು.
ಕುಮಟಾ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು, ಜೆಡಿಎಸ್ ನಾಯಕ ಸೂರಜ ನಾಯಕ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.