ಹಾವೇರಿ (Haveri) : ಮಗ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಕೇಳಿ ತಂದೆಗೂ ಹೃದಯಾಘಾತವಾಗಿ (Heart attack) ಮೃತಪಟ್ಟ ದಾರುಣ ಘಟನೆ ನಡೆದಿದೆ (sad news).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಹಾವೇರಿಯ ಬಸವೇಶ್ವರ ನಗರದ ನಿವಾಸಿ ನಿವೃತ್ತ ಸರ್ಕಾರಿ ವೈದ್ಯ ಡಾ.ವೀರಭದ್ರಪ್ಪ ಗುಂಡಗಾವಿ ಮತ್ತು ಅವರ ಮಗ ಡಾ.ವಿನಯ ಗುಂಡಗಾವಿ ಮೃತಪಟ್ಟವರು. ಮಗ ಡಾ.ವಿನಯ ಹುಬ್ಬಳ್ಳಿಯಲ್ಲಿ (Hubballi) ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ (Heart attack) ಮೃತಪಟ್ಟಿದ್ದರು. ಸಾವಿನ ಸುದ್ದಿ ಕೇಳಿ ತಂದೆ ಡಾ.ವೀರಭದ್ರಪ್ಪ ಮನೆಯ ಹೊರಗಡೆ ಬಂದು ಕಾರು ಹತ್ತುತ್ತಿದ್ದಾಗ, ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹಾವೇರಿ ನಗರಸಭೆ ಸದಸ್ಯ ಮಲ್ಲಿಕಾರ್ಜುನ ಸಾತೇನಳ್ಳಿ ತಿಳಿಸಿದ್ದಾರೆ.
ವಿಡಿಯೋ ಸುದ್ದಿಯನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್ ರೀಲ್ ವೀಕ್ಷಿಸಬಹುದು.
ಇದನ್ನೂ ಓದಿ : ಅಕ್ಟೋಬರ್ ೨೨ರಂದು ವಿವಿಧೆಡೆ ಅಡಿಕೆ ಧಾರಣೆ