ಭಟ್ಕಳ: ತಾಲೂಕಿನ ಪ್ರಸಿದ್ಧ ಚನ್ನಪಟ್ಟಣ ಹನುಮಂತ ದೇವರ ರಥೋತ್ಸವದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸರು ಭಾರೀ ಬಂದೋಬಸ್ತ್ (Heavy security ) ವ್ಯವಸ್ಥೆ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನಗರದ ಮುಖ್ಯರಸ್ತೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಪರೇಡ್ ನಡೆಸಲಾಯಿತು. ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ (Heavy security) ಎಂದು ಪೊಲೀಸರು ತಿಳಿಸಿದ್ದಾರೆ.

LPG prices/ ಎಲ್‌ಪಿಜಿ ಬೆಲೆಯಲ್ಲಿ ಅನಿಯಂತ್ರಿತ ಏರಿಕೆ: ಆಟೋ ರಿಕ್ಷಾ ಚಾಲಕರ ಅಸಮಾಧಾನ 

ಚನ್ನಪಟ್ಟಣ ಜಾತ್ರೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದಲೂ ಹೆಚ್ಚುವರಿ ಪಡೆಗಳನ್ನು ಕರೆಯಿಸಲಾಗಿದೆ. ಈ ಸಂದರ್ಭದಲ್ಲಿ ಡಿವೈಎಸ್ಪಿ ಗಿರೀಶ್, ಶಹರ ಠಾಣೆಯ ಪಿಐ ದಿವಾಕರ ಪಿ ಎಂ, ಗ್ರಾಮೀಣ ಠಾಣೆ ಪಿಐ ವೆಂಕಟೇಶ ಎಸ್ ಮುರ್ನಾಲ್, ನಗರ ಠಾಣೆ ಪಿಎಸ್‌ಐ ನವೀನ್ ಎಸ್ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Bhatkal/ ಎರಡು ಗುಂಪುಗಳ ನಡುವೆ ಹೊಡೆದಾಟ; ಇಬ್ಬರಿಗೆ ಚೂರಿ ಇರಿತ: ಮೂವರ ಬಂಧನ