ಭಟ್ಕಳ: ಹೋಳಿ ಹಬ್ಬದ ಅಂಗವಾಗಿ ಪಟ್ಟಣದ  ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಗುಲಾಲ್ ಹಚ್ಚಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು (Holi celebration).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಚೇರಿ ಕಾರ್ಯಗಳ ಮಧ್ಯೆಯೇ ಸಿಬ್ಬಂದಿ ಒಬ್ಬರಿಗೊಬ್ಬರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಿಹಿ ಹಂಚಿಕೊಂಡರು. ಕಚೇರಿ ಆವರಣದಲ್ಲಿ ಕೆಲಕಾಲ ಹಬ್ಬದ ಸಂಭ್ರಮ ಮೂಡಿದ್ದು, ಪರಸ್ಪರ ಬಣ್ಣ ಹಚ್ಚಿಕೊಂಡು ಸ್ನೇಹಭಾವ ವ್ಯಕ್ತಪಡಿಸಿದರು (Holi celebration). ಬಳಿಕ ಎಲ್ಲರು ಸಮೂಹವಾಗಿ ಫೋಟೋ ತೆಗೆದುಕೊಂಡು ಸಂಭ್ರಮ ಹಂಚಿಕೊಂಡರು.

Bhatkal/ ಹೋಟೆಲ್‌ಗೆ ನುಗ್ಗಿ ಗಲಾಟೆ; ಒಬ್ಬನ ಮೇಲೆ ಹಲ್ಲೆ

ಹಬ್ಬದ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ಸಹೋದರತ್ವ ಮತ್ತು ಸ್ನೇಹಭಾವ ಹೆಚ್ಚಾಗಲಿ ಎಂದು ಭಟ್ಕಳ (Bhatkal) ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಸಿಬ್ಬಂದಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಉಪತಹಶೀಲ್ದಾರರು, ಶಿರಸ್ತೇದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Arrested/ ಮುರುಡೇಶ್ವರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಭಟ್ಕಳದ ಮತ್ತೊಬ್ಬ ವ್ಯಕ್ತಿಯ ಬಂಧನ