ಭಟ್ಕಳ (Bhatkal) : ಹೆಜ್ಜೇನು ದಾಳಿಯಲ್ಲಿ (Honey bee attack) ಅಸ್ವಸ್ಥಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ನ.೬ರಂದು ಸಂಜೆ ೪.೩೦ರ ಸುಮಾರಿಗೆ ಮೃತಪಟ್ಟಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜಾಲಿ ಕೋಡಿ ಮೇಲಿನಮನೆಯ ಮಾಸ್ತಪ್ಪ ಮಂಜಪ್ಪ ನಾಯ್ಕ (೬೫) ಮೃತರು. ಈ ಕುರಿತು ಮೃತರ ಮಗ ಸುರೇಶ ಭಟ್ಕಳ ಶಹರ ಠಾಣೆಯಲ್ಲಿ ದೂರು (Complaint) ದಾಖಲಿಸಿದ್ದಾರೆ. ನ.೫ರಂದು ಬೆಳಿಗ್ಗೆ ೭.೩೦ರ ಸುಮಾರಿಗೆ ತಮ್ಮ ಮನೆ ಪಕ್ಕದ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಹೆಜ್ಜೇನು ದಾಳಿ ಮಾಡಿತ್ತು. ಏಕಾಏಕಿ ಹೆಜ್ಜೇನು ದಾಳಿ ಮಾಡಿ (Honey bee attack) ಕಚ್ಚಿದ್ದರಿಂದ ತುಂಬಾ ಅಸ್ವಸ್ಥಗೊಂಡಿದ್ದರು. ಅವರನ್ನು ಭಟ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿರುವ (case registered) ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ :  ಒಂದೇ ದಿನ ಎರಡು ಕಡೆ ಹೆಜ್ಜೇನು ದಾಳಿ