ಉಡುಪಿ (Udupi): ಒಡೆದ ಬಿಯರ್ ಬಾಟಲಿಯಿಂದ ಕತ್ತು ಕೊಯ್ದು ಹೊನ್ನಾವರ (Honnavar) ಮೂಲದ ಹೋಟೆಲ್ ಕಾರ್ಮಿಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಇಲ್ಲಿನ ಅನಂತ ಕಲ್ಯಾಣನಗರ ಬಳಿ ರಸ್ತೆ ಬದಿ ಬಿಸಾಡಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮೃತರನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಕಾಸರಕೋಡು ಮೂಲದ ಶ್ರೀಧರ ನಾಯ್ಕ ಎಂದು ಗುರುತಿಸಲಾಗಿದೆ. ಶ್ರೀಧರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಣಿಪಾಲದ ಹೋಟೆಲ್‌ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಕೊಲೆಗೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಶ್ವಾನದಳ ಹಾಗೂ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಗುರುವಾರ ತಡರಾತ್ರಿ ಅಥವಾ ಶುಕ್ರವಾರ ಬೆಳಗಿನ ಜಾವ ಶ್ರೀಧರ ಹತ್ಯೆಯಾಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ : ಭಟ್ಕಳದ ಸಮಾಜ ಸೇವಕ ಎಂ.ಆರ್‌.ನಾಯ್ಕಗೆ ಸನ್ಮಾನ

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ, ಶ್ರೀಧರ ಕತ್ತು ಕೊಯ್ದು ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.   ನಾವು ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ ಮತ್ತು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದೇವೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವ ವಿಶ್ವಾಸವಿದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ :   ಶ್ರೀ ಗುರು ಸುದೀಂಧ್ರ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ