ಭಟ್ಕಳ (Bhatkal) : ಕಳೆದ ಮೂರು ದಶಕಗಳಿಂದ ಪತ್ರಕರ್ತರಾಗಿ (journalist) ಸೇವೆ ಸಲ್ಲಿಸುತ್ತಿರುವ ರಾಧಾಕೃಷ್ಣ ಭಟ್ಟ ಇವರನ್ನು ಅಖಿಲ ಹವ್ಯಕ (Havyaka) ಮಹಾಸಭಾದ ವತಿಯಿಂದ ಸನ್ಮಾನಿಸಲಾಗುತ್ತಿದೆ. ಡಿ.೮ರಂದು ಹೊನ್ನಾವರದ (Honnavar) ಎಸ್.ಡಿ.ಎಂ. ಕಾಲೇಜಿನಲ್ಲಿ (SDM College) ನಡೆಯಲಿರುವ ಉತ್ತರ ಕನ್ನಡ (Uttarakannada) ಜಿಲ್ಲೆಯ ಕರಾವಳಿ (Coastal) ತಾಲೂಕುಗಳ ಸುತ್ತಮುತ್ತಲಿನ ಹವ್ಯಕರಿಗಾಗಿ ಏರ್ಪಡಿಸಲಾಗಿದ್ದ ಪ್ರತಿಬಿಂಬ-ಸನ್ಮಾನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

೧೯೮೯ನೇ ಇಸವಿಯಿಂದ ಭಟ್ಕಳದಲ್ಲಿ ಪತ್ರಕರ್ತರಾಗಿ (journalist), ಸಮಾಜ ಸೇವಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ೧೯೯೩ರಲ್ಲಿ ಭಟ್ಕಳ ತಾಲೂಕಾ ಪತ್ರಕರ್ತರ ಸಂಘ ಸ್ಥಾಪಿಸಿ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಪತ್ರಿಕೆ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವುದು ವಿಶೇಷವಾಗಿದೆ. ೨೦೧೮ ರಿಂದ ೨೦೨೨ರ ತನಕ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಕೋವಿಡ್ ಸಮಯದಲ್ಲಿ ಜಿಲ್ಲೆಯ ಪತ್ರಕರ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಲ್ಲದೇ ವಿವಿಧ ಸಂದರ್ಭದಲ್ಲಿ ಸಮಾಜದಲ್ಲಿ ಅಗತ್ಯವಿದ್ದವರಿಗೆ ಆರೋಗ್ಯದ ಕಿಟ್‌ಗಳನ್ನು ಕೊಡಿಸಿದ್ದನ್ನು ಸ್ಮರಿಸಬಹುದು.

ಇದನ್ನೂ ಓದಿ: ಮುರುಡೇಶ್ವರದಲ್ಲಿ ವೀಲಿಂಗ್‌ ಮಾಡಿದ ಚಾಲಕನಿಗೆ ದಂಡ

ತಮ್ಮ ಸೇವಾವಧಿಯಲ್ಲಿ ನಿರಂತರವಾಗಿ ಸಮಾಜದ ಕೆಳವರ್ಗದವರ ಪರವಾಗಿ, ನ್ಯಾಯಯುತ, ಸತ್ಯನಿಷ್ಠ ವರದಿ, ಅಭಿವೃದ್ಧಿ ಪರ ಸದಾ ತಮ್ಮ ಚಿಂತನೆಗಳನ್ನು ಹರಿಬಿಡುತ್ತಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರಿಗೆ ಸಮಾಜದ ವಿವಿಧ ಸಂಘಟನೆಗಳು ಹಲವಾರು ಸಂದರ್ಭಗಳಲ್ಲಿ ಸನ್ಮಾನಿಸಿವೆ. ೨೦೨೩ರಲ್ಲಿ ದಾವಣಗೆರೆಯಲ್ಲಿ (Davanagere) ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ೨೦೧೮ರಲ್ಲಿ ಶ್ರವಣಬೆಳಗೊಳದಲ್ಲಿ (Shravanabelagola) ನಡೆದ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಸಾಂಘಿಕ ಪ್ರಶಸ್ತಿ ನೀಡಲಾಗಿದೆ. ೨೦೧೬ರಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಕೊಡಮಾಡುವ ಪ್ರತಿಷ್ಠಿತ ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದಾರೆ.

ಇದನ್ನೂ ಓದಿ: ಆರೋಪಿಗಳನ್ನು ಬಂಧಿಸಿ ಕರೆದೊಯ್ದ ಗೋವಾ ಪೊಲೀಸರು

ಇವರ ಸೇವೆಯನ್ನು ಗುರುತಿಸಿ ಜಿಲ್ಲಾ ಪತ್ರಿಕಾ ಮಂಡಳಿಯಿಂದ ೨೦೦೫ರಲ್ಲಿ ಹಳಿಯಾಳದಲ್ಲಿ ಜಿಲ್ಲಾ ಸಮ್ಮಾನ, ಭಟ್ಕಳದ ರೋಟರಿ ಕ್ಲಬ್, ಅಂಜುಮನ್ ಕಾಲೇಜಿನ ಕನ್ನಡ ಸಂಘ, ಕೆ.ಎಸ್.ಆರ್.ಟಿ.ಸಿ. ಕನ್ನಡ ಸಂಘ, ಮಾನಾ ಕುಟುಂಬ, ಆನಂದಾಶ್ರಮ ವಿದ್ಯಾ ಸಂಸ್ಥೆ, ಭಟ್ಕಳದ ಶಾರದೋತ್ಸವ ಸಮಿತಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ರಸ್ತೆ ಬದಿ ಬಿಸಾಡಿದ ಸ್ಥಿತಿಯಲ್ಲಿ ಶವ ಪತ್ತೆ