ಭಟ್ಕಳ: ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಕಳೆದ 30 ವರ್ಷಗಳ ಕಾಲ ಗ್ರೂಪ್-ಡಿ ಸಿಬ್ಬಂದಿಯಾಗಿ ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಹೂವಾ ಜಿ ಗೌಡ ಅವರಿಗೆ ತಹಶೀಲ್ದಾರ ಕಚೇರಿಯಲ್ಲಿ ಭಾವಪೂರ್ಣ ಬೀಳ್ಕೊಡುಗೆ (farewell) ನೀಡಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಹೂವಾ ಗೌಡರ ದೀರ್ಘ ಸೇವಾ ಅವಧಿಯನ್ನು ಸ್ಮರಿಸಿ ಪ್ರಶಂಸಿಸಿದರು. ಕಚೇರಿಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಅವರ ಕೊಡುಗೆ ಮಹತ್ವದ್ದಾಗಿದ್ದು, ಇಲಾಖೆಯ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಗದಿತ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಿಸುವಲ್ಲಿ ಅವರು ಸದಾ ಜವಾಬ್ದಾರಿಯಿಂದ ನಡೆದುಕೊಂಡಿದ್ದರು ಎಂದು ಹೇಳಿದರು.
newlywed couple/ ಬೈಕಿನಲ್ಲಿದ್ದ ನವ ದಂಪತಿ ಮೇಲೆ ಬಸ್ ಹತ್ತಿಸಲು ಹೋದ ಚಾಲಕ
ಸಮಯಪಾಲನೆ, ಕರ್ತವ್ಯಪ್ರಜ್ಞೆ ಹಾಗೂ ಸೇವಾ ಮನೋಭಾವದಿಂದ ಗುರುತಿಸಿಕೊಂಡಿದ್ದ ಹೂವಾ ಗೌಡರು ಹೇಳಿದ ಸಮಯಕ್ಕಿಂತ ಮುಂಚಿತವಾಗಿಯೇ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕಚೇರಿ ಅವಧಿ ಮುಗಿದ ಬಳಿಕವೂ ಅಗತ್ಯವಿದ್ದಾಗ ಅಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ಸ್ಮರಿಸಿದ ತಹಶೀಲ್ದಾರರು, ಅವರ ನಿವೃತ್ತಿ ಜೀವನ ಸುಖ, ಶಾಂತಿ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.
Tribute/ ಡಾ ಆರ್ ವಿ ಸರಾಫರಿಗೆ ನುಡಿನಮನ-ಶಾಲೆಗೆ ೨.೫೦ ಲಕ್ಷ ರೂ ದೇಣಿಗೆ
ಈ ಸಂದರ್ಭದಲ್ಲಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೂವಾ ಗೌಡರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹೂವಾ ಜಿ ಗೌಡ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ೧೨ ವರ್ಷಗಳ ಕಾಲ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ ಬಳಿಕ ತಹಶೀಲ್ದಾರ ಹಾಗೂ ಸಹಾಯಕ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಿತು. ಸೇವಾ ಅವಧಿಯುದ್ದಕ್ಕೂ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ತಮ್ಮನ್ನು ಕೇವಲ ಸಿಬ್ಬಂದಿಯಂತೆ ಕಾಣದೆ ಕುಟುಂಬದ ಸದಸ್ಯರಂತೆ ಪ್ರೀತಿ ಮತ್ತು ಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
beer bottle/ ನಾಯಿ ವಿಚಾರಕ್ಕೆ ಬಿಯರ್ ಬಾಟಲಿಯಿಂದ ಹಲ್ಲೆ
“ನನ್ನ ಸೇವಾ ಅವಧಿಯಲ್ಲಿ ಸರ್ಕಾರದ ಕೆಲಸವನ್ನು ಅತ್ಯಂತ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ಸಹಕರಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ನಾನು ಚಿರಋಣಿ” ಎಂದು ಅವರು ಹೇಳಿದರು.
Mankal Vaidya/ ಮಂಕಾಳ ವೈದ್ಯಗೆ ತಪ್ಪಿದ ಸಚಿವ ಸ್ಥಾನ: ಅಭಿಮಾನಿಗಳಲ್ಲಿ ಅಸಮಾಧಾನ
ಬಳಿಕ ಹೂವಾ ಜಿ ಗೌಡ ಅವರನ್ನು ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಪುಷ್ಪಮಳೆಗೈದು ಭಾವಪೂರ್ಣವಾಗಿ ಬೀಳ್ಕೊಟ್ಟರು (farewell). ಕಾರ್ಯಕ್ರಮದಲ್ಲಿ ಉಪತಹಶೀಲ್ದಾರರು, ಶಿರಸ್ತೇದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹೂವಾ ಗೌಡರ ಧರ್ಮಪತ್ನಿ ಸುನೀತಾ ಗೌಡ ಹಾಗೂ ಪುತ್ರಿ ಐಶ್ವರ್ಯ ಗೌಡ ಸೇರಿದಂತೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
Murinakatte/ ಮುರಿನಕಟ್ಟೆ ಸ್ಥಳದಲ್ಲಿ ರಸ್ತೆ ಕಾಮಗಾರಿ: ಬಿಗು ಬಂದೋಬಸ್ತ್



