ಭಟ್ಕಳ: ರಾಷ್ಟ್ರೀಯ ಹೆದ್ದಾರಿ (National Highway)–೬೬ರ ಕೈಕಿಣಿ ಬಸ್ತಿ ಸಮೀಪ ಬುಧವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ (road accident) ಭಟ್ಕಳ (Bhatkal) ತಾಲೂಕಿನ ತೆರ್ನಮಕ್ಕಿ ಗ್ರಾಮದ ಸಬ್ಬತ್ತಿ ನಿವಾಸಿ ಕೃಷ್ಣ ಶನಿಯಾರ ನಾಯ್ಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ (road accident) ಈ ದುರ್ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿಯಂತೆ, ತಿರುವಿನಲ್ಲಿ ನಿಂತಿದ್ದ ಕಾರನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿದ ಲಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಸವಾರನ ಮೇಲೆಯೇ ಹರಿದಿದೆ. ಡಿಕ್ಕಿಯ ರಭಸಕ್ಕೆ ಮೃತರ ತಲೆಯ ಭಾಗ ಛಿದ್ರಗೊಂಡಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.
Fish Farmers’ Day/ ಭಟ್ಕಳದಲ್ಲಿ ಮೀನು ಕೃಷಿಕರ ದಿನಾಚರಣೆ
ಅಪಘಾತದ ತೀವ್ರತೆಗೆ ಲಾರಿಯ ಮುಂಭಾಗದಲ್ಲಿ ಬೆಂಕಿಯೂ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಮುರುಡೇಶ್ವರ (Murudeshwar) ಪೊಲೀಸ್ ಠಾಣೆಯ (police station) ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಅಪಘಾತದ ಬಳಿಕ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವುದೇ ಇಂತಹ ಅವಘಡಗಳಿಗೆ ಕಾರಣ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸಲು ವಿರೋಧ ವ್ಯಕ್ತಪಡಿಸಿದ ಸಾರ್ವಜನಿಕರು, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಐಆರ್ಬಿ (IRB) ಸಂಸ್ಥೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಭರವಸೆ ನೀಡುವವರೆಗೆ ಶವವನ್ನು ತೆರವುಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಹಿನ್ನೆಲೆಯಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
course in London/ ಲಂಡನ್ನಲ್ಲಿ ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್ ಕೋರ್ಸ್ ಪೂರ್ಣಗೊಳಿಸಿದ ಭಟ್ಕಳದ ಪ್ರಜ್ವಲ ನಾಯ್ಕ
ನಂತರ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಮನವೊಲಿಕೆಯ ಬಳಿಕ ವಾಹನದ ಅಡಿಯಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದು ಭಟ್ಕಳ ಸರ್ಕಾರಿ ಆಸ್ಪತ್ರೆಯ (government hospital) ಶವಾಗಾರಕ್ಕೆ ರವಾನಿಸಲಾಯಿತು. ಈ ಸಂಬಂಧ ಮುರುಡೇಶ್ವರ (Murdeshwar ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
Distribution/ ಬೈಲೂರು ಕ್ಲಸ್ಟರ್ನ ೧೫ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ


