ಭಟ್ಕಳ: ತಾಲೂಕಿನ ಜಾಲಿ ತಲಗೇರಿಯ ವಿವೇಕಾನಂದ ನಗರದಲ್ಲಿ ಗೋ ಕಳ್ಳರ ತಂಡದ ಭಾರಿ ಹೈಡ್ರಾಮ (Huge drama) ರವಿವಾರ ನಸುಕಿನ ಜಾವ ನಡೆದಿದ್ದು, ಗ್ರಾಮಸ್ಥರ ಎಚ್ಚರಿಕೆಯಿಂದ ಕಳ್ಳತನ ಯತ್ನ ವಿಫಲವಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನಸುಕಿನ ಜಾವ ಸುಮಾರು ೩.೪೫ರ ವೇಳೆ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಗೋವನ್ನು ಕದ್ದೊಯ್ಯಲು ಯತ್ನಿಸುತ್ತಿದ್ದಾಗ ಸ್ಥಳೀಯರು ಅನುಮಾನಗೊಂಡು ತಡೆದಿದ್ದಾರೆ. ಈ ವೇಳೆ ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದು, ವಾಹನದಲ್ಲಿದ್ದ ಮೊಬೈಲ್ ಫೋನ್ ಸ್ಥಳದಲ್ಲೇ ಸಿಕ್ಕಿದೆ. ಘಟನೆಯ ನಂತರ ಆರೋಪಿಗಳು ಸಮೀಪದ ಅರಣ್ಯ ಪ್ರದೇಶದಲ್ಲಿ ಅಡಗಿ, ಮತ್ತೊಂದು ತಂಡವನ್ನು ಕರೆಸಿಕೊಂಡಿರುವುದಾಗಿ ತಿಳಿದುಬಂದಿದೆ. ಬಳಿಕ ಕರಿಕಲ್ ರಸ್ತೆಯ ಖಾಸಗಿ ಬ್ಯಾಂಕ್ ಹಿಂಭಾಗದಲ್ಲಿ ಅವಿತುಕೊಂಡಿದ್ದ ಆರೋಪಿಗಳನ್ನು ಹಿಡಿಯಲು ಪೊಲೀಸರು ಹಾಗೂ ಗ್ರಾಮಸ್ಥರು ಮುಂದಾದಾಗ, ಬೈಕ್ ಬಿಟ್ಟು ಮತ್ತೆ ಪರಾರಿಯಾಗಿದ್ದಾರೆ (Huge drama).

Rathotsava/ ಚಿತ್ರಾಪುರದಲ್ಲಿ ರಥೋತ್ಸವ ಸಂಪನ್ನ

ಗ್ರಾಮಸ್ಥರು ಆರೋಪಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿನನಿತ್ಯ ಸಾಕಿ ಬೆಳೆಸುತ್ತಿರುವ ಗೋವುಗಳನ್ನು ಕಳ್ಳತನ ಮಾಡಲು ಯತ್ನಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ. ಆರೋಪಿಗಳು ನಕಲಿ ನಂಬರ್ ಪ್ಲೇಟ್ ಬಳಸಿ ಗುರುತು ಮರೆಮಾಚಲು ಯತ್ನಿಸಿರುವುದು ಸಹ ಬೆಳಕಿಗೆ ಬಂದಿದೆ. ಇದಲ್ಲದೆ, ಆರೋಪಿಗಳು ಚೂರಿ ಸೇರಿದಂತೆ ಅಪಾಯಕಾರಿ ಆಯುಧಗಳನ್ನು ಹಿಡಿದುಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

CM Medal/ ಪಿಎಸ್‌ಐ ನವೀನ್ ನಾಯ್ಕಗೆ ಸಿಎಂ ಪದಕ ಪ್ರದಾನ 

ಈ ಕುರಿತು ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Durgaparameshwari/ ೬೦೦ ವರ್ಷಗಳ ಇತಿಹಾಸದ ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ