ಭಟ್ಕಳ: ತಾಲೂಕಿನ ಅಳ್ವೆಕೋಡಿ ಪ್ರದೇಶದಲ್ಲಿ ಚಿಪ್ಪಿಕಲ್ಲು ಸಂಗ್ರಹಿಸಲು ತೆರಳಿದ್ದ ವೇಳೆ ಸಂಭವಿಸಿದ ದುರಂತದಲ್ಲಿ (chippikallu tragedy) ೧೧ ಮಂದಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಕುಟುಂಬಗಳಿಗೆ (victims) ನೆರವಾಗುವ ಉದ್ದೇಶದಿಂದ ವಿಜಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಸಿ ಸಾಮಗ್ರಿಗಳನ್ನು (groceries) ವಿತರಿಸಲಾಯಿತು (Humanitarian).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತೀರ್ಥಹಳ್ಳಿಯ (Thirthahalli) ನಿಟ್ಟೂರಿನ ಶ್ರೀ ನಾರಾಯಣಗುರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ರೇಣುಕಾನಂದ ಸ್ವಾಮಿ ಸಂತ್ರಸ್ತ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸಂಕಷ್ಟದ ಸಂದರ್ಭದಲ್ಲಿ ಸಮಾಜವು ನೋವಿನಲ್ಲಿರುವ ಕುಟುಂಬಗಳ ಬೆನ್ನಿಗೆ ನಿಲ್ಲಬೇಕು. ದುರ್ಘಟನೆಯಿಂದ ಜೀವನ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಅಗತ್ಯ ನೆರವು ನಿರಂತರವಾಗಿ ದೊರೆಯುವಂತೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

Case registered/ ಗೋವಿಂದ ನಾಯ್ಕ ವಿರುದ್ಧ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬೆಂಬಲ 

ವಿಜಯ ಚಾರಿಟೇಬಲ್ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷೆ ದೀಪಾ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಮಾನವೀಯ (Humanitarian) ಸ್ಪಂದನೆ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್, ಶ್ರೀಧರ ನಾಯ್ಕ, ಪದ್ಮ ನಾಯ್ಕ, ರಾಘವೇಂದ್ರ, ರಾಜು ನಾಯ್ಕ, ಸಂತೋಷ ನಾಯ್ಕ, ಮಂಜು ನಾಯ್ಕ, ಮೋಹನ ಸೇರಿದಂತೆ ಸಾರದಹೊಳೆ ನಾಮಧಾರಿ ಸಮಾಜದ ಅಧ್ಯಕ್ಷರು, ಪ್ರಮುಖರು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.

Appeal/ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಕಾರ್ಮಿಕ ನಿರೀಕ್ಷಕರಿಗೆ ಮನವಿ