ಸಾಗರ (Sagar) : ಕಾನೂನು ಬಾಹಿರವಾಗಿ ಚಿರತೆಯ (Leopard) ಉಗುರು ಹಾಗೂ ಚಿರತೆಯ ಹಲ್ಲುಗಳ ಅಕ್ರಮ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಇಲ್ಲಿನ ಆನಂದಪುರದ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಪೊಲೀಸ್ ಅರಣ್ಯ ಸಂಚಾರಿದಳದ ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತೃತ್ವದಲ್ಲಿ ದಾಳಿ ನಡೆದಿತ್ತು. ಈ ಸಂಬಂಧ ಶಿಕಾರಿಪುರ ತಾಲೂಕಿನ ಹಾರೇಗೊಪ್ಪದ ಲೋಕೇಶ್ ಎಂಬಾತನನ್ನು
ವಶಕ್ಕೆ ಪಡೆದಿದ್ದಾರೆ. ಆತನನ್ನು ಪರಿಶೀಲಿಸಿದಾಗ ಆರೋಪಿಯ ಬಳಿ ಚಿರತೆಯ (Leopard) ೧೬ ಉಗುರು ಮತ್ತು ೩ ಹಲ್ಲುಗಳು ಪತ್ತೆಯಾಗಿವೆ. ಇವುಗಳನ್ನು ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪೋಲೀಸ್ ಅರಣ್ಯ ಸಂಚಾರಿದಳದ ಸಿಬ್ಬಂದಿ ಗಣೇಶ, ವಿಶ್ವನಾಥ, ಆಂಜನೇಯ, ದಿನೇಶ, ಪ್ರಮೋದಕುಮಾರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : landslide/ ಶಿರೂರಿನಲ್ಲಿ ಮುಂದಿನ ಕಾರ್ಯಾಚರಣೆ ಅಗತ್ಯವಿಲ್ಲ ಎಂದ ಹೈಕೋರ್ಟ್