ಭಟ್ಕಳ (Bhatkal): ತಾಲೂಕಿನ ಮಾರುಕೇರಿಯ ಎಸ್ ಪಿ ಹೈಸ್ಕೂಲ್ ಆವರಣದಲ್ಲಿ ಗುರುವಾರ ಏರ್ಪಡಿಸಲಾದ ಎರಡು ದಿನಗಳ ಕೋಣಾರ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಮಾರುಕೇರಿ ಗ್ರಾಪಂ ಉಪಾಧ್ಯಕ್ಷ ಎಂ. ಡಿ. ನಾಯ್ಕ ಚಾಲನೆ ನೀಡಿದರು (sports inauguration).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನಂತರ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವ ಹೆಚ್ಚಾಗಬೇಕು. ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಅನಾವರಣಗೊಳ್ಳಲು ಇಂತಹ ಕ್ರೀಡಾಕೂಟ ಸಹಕಾರಿ ಆಗಿದೆ. ಗ್ರಾಮಾಂತರ ಭಾಗದಲ್ಲಿ ಅನೇಕ ಕ್ರೀಡಾ ಪಟುಗಳಿದ್ದಾರೆ. ಹಲವರು ಹಲವು ರೀತಿಯ ಸಾಧನೆ ಮಾಡಿದ್ದಾರೆ. ಇವರಿಗೆ ಸರಿಯಾದ ರೀತಿಯಲ್ಲಿ ಪ್ರೋತ್ಸಾಹ ಲಭಿಸಬೇಕು. ಗ್ರಾಮೀಣ ಭಾಗದ ಕೋಣಾರದ ಪ್ರತಿಭಾವಂತೆ ಕಾವ್ಯ ಗೊಂಡ ಅವರು ಪ್ರಬಂಧ ಮಂಡಿಸಲು ಅಮೇರಿಕಾಗೆ ಹೋಗಿರುವುದು ಶ್ಲಾಘನೀಯ ಎಂದರು.

ಇದನ್ನೂ ಓದಿ : ವಿದ್ಯಾಂಜಲಿ ಶಾಲೆಯಲ್ಲಿ ಗೋಕುಲಾಷ್ಟಮಿ ಸಂಭ್ರಮೋತ್ಸವ

ಮುಖ್ಯ ಅತಿಥಿಯಾಗಿದ್ದ ಬಿಇಓ ವೆಂಕಟೇಶ ನಾಯಕ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ಗ್ರಾಮಾಂತರ ಭಾಗದಲ್ಲಿ ದಾನಿಗಳ ಸಹಕಾರದಿಂದ ಉತ್ತಮ ಕಾರ್ಯಕ್ರಮ ಏರ್ಪಡಿಸಿರುವುದು ಶ್ಲಾಘನೀಯ ಎಂದರು.

ಇದನ್ನೂ ಓದಿ : ಆಗಸ್ಟ್‌ ೨೯ರಂದು ವಿವಿಧೆಡೆ ಅಡಿಕೆ ಧಾರಣೆ

ಅಧ್ಯಕ್ಷತೆ ವಹಿಸಿದ್ದ ಮಾರುಕೇರಿ ಗ್ರಾ.ಪಂ. ಅಧ್ಯಕ್ಷೆ ನಾಗವೇಣಿ ಗೊಂಡ ಮಾತನಾಡಿ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಉತ್ತಮವಾಗಿ ಆಡಬೇಕು. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹೆಸರು ಮಾಡಬೇಕು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡೆ ಮತ್ತಿತರ ಚಟುವಟಿಕೆಗಳಲ್ಲಿಯೂ ಸಾಧನೆ ಮಾಡಬೇಕು ಎಂದರು.

ಇದನ್ನೂ ಓದಿ :  ಪಾರ್ಕಿಂಗ್ ಸ್ಥಳಕ್ಕಾಗಿ ಟ್ಯಾಕ್ಸಿ ಚಾಲಕ-ಮಾಲಕರ ಮನವಿ

ವೇದಿಕೆಯಲ್ಲಿ ಮಾರುಕೇರಿ ಎಸ್ ಪಿ ಹೈಸ್ಕೂಲಿನ ಅಧ್ಯಕ್ಷ ಶ್ರೀಕಂಠ ಹೆಬ್ಬಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಎನ್ ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ, ಕೋಟಖಂಡ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ ನಾಯ್ಕ, ಕೋಟಖಂಡ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಹೆಬ್ಬಾರ, ಗ್ರಾಪಂ ಸದಸ್ಯರಾದ ಮಾಸ್ತಿ ಗೊಂಡ, ನಾರಾಯಣ ಗೊಂಡ, ಮೋಹಿನಿ ಗೊಂಡ, ನಾಗವೇಣಿ ಮೊಗೇರ, ಎಸ್ ಪಿ ಹೈಸ್ಕೂಲಿನ ಮುಖ್ಯ ಶಿಕ್ಷಕ ಪಿ. ಟಿ. ಚವ್ಹಾಣ ಮುಂತಾದವರಿದ್ದರು.

ಇದನ್ನೂ ಓದಿ :  ಯುವತಿಯೊಂದಿಗೆ ಭಟ್ಕಳದ ಯುವಕನ ಅನುಚಿತ ವರ್ತನೆ

ಕೋಟಖಂಡ ಶಾಲೆಯ ಮುಖ್ಯ ಶಿಕ್ಷಕ ಚಿದಾನಂದ ಪಟಗಾರ ಸ್ವಾಗತಿಸಿ, ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ ಪಟಗಾರ ವಂದಿಸಿದರು. ಕಾರ್ಯಕ್ರಮದಲ್ಲಿ ಕ್ರೀಡೆ ಮುಂತಾದ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ಪದಕ, ನಗದು ಪುರಸ್ಕಾರ ನೀಡಲಾಯಿತು.

ಇದನ್ನೂ ಓದಿ : ಎರಡು ಚಿನ್ನದ ಪದಕ ಪಡೆದ ಭಟ್ಕಳದ ಪೋರಿ

ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕೋಟಖಂಡ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ವಿಡಿಯೋ ಸಹಿತ ಇದನ್ನೂ ಓದಿ :  ಗರ್ಭಿಣಿಯ ಗರ್ಭಕೋಶದಲ್ಲಿ ಮಲಮತ್ತ; ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ