ಭಟ್ಕಳ: ಬಡವರು, ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಇಂದಿರಾ ಕ್ಯಾಂಟಿನ್ (Indira canteen) ಯೋಜನೆಯ ಮೂಲಕ ರಾಜ್ಯದಾದ್ಯಂತ ಸುಮಾರು ೬ ಸಾವಿರ ಮಂದಿಗೆ ಉದ್ಯೋಗ ಸೃಷ್ಟಿಯಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ತಾಲೂಕಿನ ಪಟ್ಟಣ ಪಂಚಾಯಿತಿ ಜಾಲಿ ವ್ಯಾಪ್ತಿಯ ಅಜಾದ್ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ (Indira canteen) ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಸಚಿವರು ಸ್ವತಃ ಅಡುಗೆ ಬಡಿಸಿ ಸಾರ್ವಜನಿಕರಿಗೆ ಊಟ ವಿತರಿಸುವ ಮೂಲಕ ಕ್ಯಾಂಟಿನ್‌ಗೆ ಚಾಲನೆ ನೀಡಿದರು. ಬಳಿಕ ಕ್ಯಾಂಟಿನ್‌ನಲ್ಲಿ ತಯಾರಾದ ಆಹಾರವನ್ನು ಸವಿದು ಅದರ ಗುಣಮಟ್ಟವನ್ನು ಪರಿಶೀಲಿಸಿದರು.

ಇದನ್ನು ಓದಿ: Road repair/ ಗುಡ್ಡೆಕಟ್ಟೆ ರಸ್ತೆ ಹೊಂಡಮುಚ್ಚಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟ ಯುವಕರು!

ಪಟ್ಟಣದ ಹುರಳಿಸಾಲಿನಲ್ಲಿ ಹೌಸಿಂಗ್ ಸ್ಕೀಮ್ ಅಡಿಯಲ್ಲಿ ೭೦೦ ಮನೆಗಳ ನಿರ್ಮಾಣ ಯೋಜನೆಯನ್ನು ಜಾರಿಗೆ ತಂದಿರುವುದಾಗಿ ಸಚಿವರು ಹೇಳಿದರು. ಸರ್ಕಾರದ ಜಾಗವನ್ನು ಹೌಸಿಂಗ್ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಯೋಜನೆ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಸಾಮಾನ್ಯ ಜನರಿಗೆ ಮನೆ ಸಿಗುವ ಉದ್ದೇಶದಿಂದಲೇ ಈ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಇದನ್ನು ಓದಿ: Honesty/ ಚಿನ್ನಾಭರಣವಿದ್ದ ಬ್ಯಾಗ್ ಮರಳಿಸಿದ ಆಟೋ ಚಾಲಕ

ಸರ್ಕಾರಿ ಪಡ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರು ಅಗತ್ಯ ದಾಖಲೆ ಸಲ್ಲಿಸಿದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ೫ ಗುಂಟೆ ಹಾಗೂ ನಗರ ವ್ಯಾಪ್ತಿಯಲ್ಲಿ ೨.೫ ಗುಂಟೆ ಜಾಗದ ಪಹಣಿ ಪತ್ರವನ್ನು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದನ್ನು ಓದಿ: Ahinda unity/ ಭಟ್ಕಳದಲ್ಲಿ ‘ಅಹಿಂದ’ ಒಗ್ಗಟ್ಟು

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಫ್ಸಾ ಹುಜೈಸಾ, ಉಪಾಧ್ಯಕ್ಷ ಸೈಯದ್ ಇಮ್ರಾನ್ ಅಹ್ಮದ್ ಲಂಕಾ, ಈಶ್ವರ ಮೊಗೇರ, ಮುಖ್ಯಾಧಿಕಾರಿ ಎನ್. ಮಂಜಪ್ಪ, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ರಾಜು ನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಕೆ. ಎಸ್. ಕಮ್ಮಾರ, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ನಾರಾಯಣ ನಾಯ್ಕ ನೆರವೇರಿಸಿದ್ದು, ಬಿಂದು ಸಂಗಡಿಗರು ಪ್ರಾರ್ಥನೆ ಸಲ್ಲಿಸಿದರು.

ಇದನ್ನು ಓದಿ: Fisherman death/ ಸಮುದ್ರದಲ್ಲಿ ಮುಳುಗಿ ಮೀನುಗಾರ ಸಾವು