ಭಟ್ಕಳ (Bhatkal) : ಡಿಸೆoಬರ ೩೧ರಂದು ಅಳಿವೆಕೋಡಿ ಶ್ರೀ ದುರ್ಗಾಪರಮೇಶ್ವರಿ ಸಮುದಾಯ ಭವನದಲ್ಲಿ ನಡೆಯಲಿರುವ ಭಟ್ಕಳ ತಾಲೂಕಾ ೧೧ನೇ ಕನ್ನಡ (Kannada) ಸಾಹಿತ್ಯ ಸಮ್ಮೇಳನದ (Sahitya Sammelan) ಲಾಂಛನ ಹಾಗೂ ಆಮಂತ್ರಣ ಪತ್ರಿಕೆಯನ್ನು (Invitation) ಮೀನುಗಾರಿಕಾ ಹಾಗೂ ಬಂದರು ಇಲಾಖೆ ಸಚಿವ ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಮಂಕಾಳ ವೈದ್ಯ (Mankal Vaidya) ಬಿಡುಗಡೆಗೊಳಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಆಮಂತ್ರಣ ಪತ್ರಿಕೆಯನ್ನು (Invitation) ಬಿಡುಗಡೆಗೊಳಿಸಿ ಮಾತನಾಡಿದ ಸಚಿವರು, ಸಾಹಿತಿ ನಾರಾಯಣ ಯಾಜಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಅಕ್ಷರ ಜಾತ್ರೆಯಲ್ಲಿ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಕನ್ನಡದ ಮನಸುಗಳು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಕರೆನೀಡಿದರು. ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಸಾಹಿತಿ ಜಮಿರುಲ್ಲ ಷರೀಫ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ, ತಾಲೂಕು ಕಸಾಪ ಗೌರವ ಕೋಶಧ್ಯಕ್ಷ ಶ್ರೀಧರ ಶೇಟ, ಗೌರವ ಕಾರ್ಯದರ್ಶಿ ಸಯ್ಯದ್ ಗೌಸ್ ಮೋಹಿಯುದ್ದಿನ್, ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ ಮುರ್ಡೇಶ್ವರ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ. ಎನ್. ನಾಯ್ಕ, ರಾಜ್ಯ ಪ್ರತಿನಿಧಿ ಸದಸ್ಯ ಕುಮಾರ ನಾಯ್ಕ ಉಪಸ್ಥಿತರಿದ್ದರು.
ಇದನ್ನೂ ಓದಿ : ಡಿ. ೩೧ರಂದು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನ